10:54 AM Sunday7 - March 2021
ಬ್ರೇಕಿಂಗ್ ನ್ಯೂಸ್
ಕುಂಬಳ ಕಾಯಿ ಕಳ್ಳ ಗಾದೆ: ಸೆಕ್ಸ್ ಸಿಡಿ ಬಳಿಕ ತಡೆಯಾಜ್ಞೆ ಕೋರುವ ಸಚಿವರ ಸಂಖ್ಯೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ದೆಹಲಿ ಖಾಸಗಿ ಆಸ್ಪತ್ರೆಗೆ ಸಂಸದ ಅನಂತ ಕುಮಾರ್ ಹೆಗಡೆ ದಾಖಲು: ಕಾಲಿಗೆ ಶಸ್ತ್ರ… ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ 

ಇತ್ತೀಚಿನ ಸುದ್ದಿ

ದಿಲ್ಲಿ ಭೇಟಿ ಮುಗಿಸಿದ ಯಡಿಯೂರಪ್ಪ: ರಾಜ್ಯ  ಸಂಪುಟ ವಿಸ್ತರಣೆ ಏನಿದ್ದರೂ 3-4 ದಿನಗಳ ಬಳಿಕವೇ !

November 19, 2020, 8:45 AM

ನವದೆಹಲಿ(reporterkarnataka news): ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಬುಧವಾರ ದಿಲ್ಲಿಗೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಜತೆ ಮಾತುಕತೆ ನಡೆಸಿದ್ದಾರೆ. ಆದರೆ ಗೃಹ ಸಚಿವ ಅಮಿತ್ ಶಾ ಭೇಟಿಯಾಗಲು ಯಡಿಯೂರಪ್ಪ ಅವರಿಗೆ ಸಾಧ್ಯವಾಗಲಿಲ್ಲ. 

ನಡ್ಡಾ ಅವರಿಗೆ ಯಡಿಯೂರಪ್ಪ ತನ್ನ ಬೇಡಿಕೆ ತಿಳಿಸಿದ್ದಾರೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು

ತಥಾಸ್ತು ಎಂದು ಹೇಳಿಲ್ಲ, ಬದಲಿಗೆ 3-4 ದಿನಗಳಲ್ಲಿ ಪಕ್ಷದ ಹೈಕಮಾಂಡ್ ಕಡೆಯ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಜತೆ ಮುಖ್ಯಮಂತ್ರಿಯವರು ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಯಡಿಯೂರಪ್ಪ ಅವರ ಮಾತುಗಳನ್ನು ನಡ್ಡಾ ಅವರು ಆಲುಸಿದಷ್ಟೇ ಅಲ್ಲದೆ ಯಾವುದೇ ಸ್ಪಷ್ಟ ಉತ್ತರ ನೀಡಿಲ್ಲ ಎಂದು ತಿಳಿದು ಬಂದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಯಡಿಯೂರಪ್ಪ ಅವರಿಗೆ ಅವಕಾಶ ಸಿಗಲಿಲ್ಲ. ಇದರಿಂದ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಮುಖ್ಯಮಂತ್ರಿಯವರು ಇನ್ನೂ 3-4 ದಿನಗಳ ಕಾಲ ಕಾಯುವುದು ಅನಿವಾರ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು