ಇತ್ತೀಚಿನ ಸುದ್ದಿ
ದೇಶದಲ್ಲಿ ಒಂದೇ ದಿನ ಕೊರೋನಾಕ್ಕೆ 941 ಬಲಿ
August 17, 2020, 5:40 AM

ನವದೆಹಲಿ(reporterkarnatakanews):ಮಾರಕ ಕೊರೋನಾ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 941 ಮಂದಿಯ ಪ್ರಾಣ ಅಪಹರಿಸಿದೆ. ಇದೀಗ ಕೊರೋನಾದಿಂದ ದೇಶದಲ್ಲಿ ಮೃತಪಟ್ಟವರ ಸಂಖ್ಯೆ 50, 921ಕ್ಕೆ ತಲುಪಿದೆ. ಮಹಾರಾಷ್ಟ್ರದಲ್ಲಿ ಅತ್ಯಧಿಕ ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 57 982 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ದೇಶದಲ್ಲಿನ ಕೊರೋನಾ ಸೋಂಕಿತರ ಸಂಖ್ಯೆ 26, 47, 664ಕ್ಕೆ ತಲುಪಿದೆ. ಇದೇ ವೇಳೆ ಆಸ್ಪತ್ರೆಗಳಲ್ಲಿ 6, 76, 900 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ