1:02 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ದೇಶದ್ರೋಹ ಪ್ರಕರಣಗಳ ಲಿಸ್ಟ್‌ನಲ್ಲಿ ಕರ್ನಾಟಕ ಟಾಪರ್..! ಒಂದೇ ವರ್ಷದಲ್ಲಿ ದಾಖಲಾದ ದೇಶದ್ರೋಹ ಪ್ರಕರಣಗಳ ಸಂಖ್ಯೆ ಎಷ್ಟು ಗೊತ್ತಾ ?

October 5, 2020, 8:32 AM


ನವದೆಹಲಿ(Reporter Karnataka News)
ಇಡೀ ಭಾರತದಲ್ಲಿಯೇ ದೇಶದ್ರೋಹದ ಪ್ರಕರಣಗಳ ಸಂಖ್ಯೆಯಲ್ಲಿ ಕರ್ನಾಟಕವೇ ಮುಂದಿದೆ. ಕಳೆದ ಒಂದು ವರ್ಷದಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ ಬೇರೆಲ್ಲ ರಾಜ್ಯಗಳಿಗಿಂತ ಮುಂಚೂಣಿಯಲ್ಲಿದೆ ನಮ್ಮ ರಾಜ್ಯ.
2019ರಲ್ಲಿ ದೇಶದ್ರೋಹ ಪ್ರಕರಣಗಳ ಸಂಖ್ಯೆಯಲ್ಲಿ ಶೇ 25ರಷ್ಟು ಹೆಚ್ಚಳವಾಗಿದೆ. ದೇಶದ್ರೋಹದ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದ್ದರೂ, ಆರೋಪ ಸಾಬೀತಾಗಿ, ಶಿಕ್ಷೆಗೆ ಒಳಗಾಗುವವರ ಪ್ರಮಾಣ ತೀರಾ ಕಡಿಮೆ. ಕಳೆದ ವರ್ಷ ಇಂಥ 30 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಒಂದು ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ.
2015ರಿಂದ 19ರವರೆಗಿನ ಐದು ವರ್ಷಗಳಲ್ಲಿ, ದೇಶದ್ರೋಹದ 283 ಪ್ರಕರಣಗಳು ದಾಖಲಾಗಿದ್ದವು. 56 ಪ್ರಕರಣಗಳ ವಿಚಾರಣೆ ನಡೆದಿದ್ದು, 51 ಪ್ರಕರಣಗಳಿಗೆ ಸಂಬಂಧಿಸಿದಂತೆ 55 ಮಂದಿ ಬಿಡುಗಡೆಯಾಗಿದ್ದಾರೆ. ಉಳಿದ ಐದು ಪ್ರಕರಣಗಳಿಗೆ ಸಂಬಂಧಿಸಿದಂತೆ 9 ಮಂದಿಗೆ ಜೈಲು ಶಿಕ್ಷೆಯಾಗಿದೆ.
ಕರ್ನಾಟಕದಲ್ಲೂ ದೇಶದ್ರೋಹದ ಪ್ರಕರಣ ದಾಖಲು ಸಂಖ್ಯೆಯಲ್ಲಿ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. 2018ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದರೆ, ಕಳೆದ ವರ್ಷ ಇಂಥ 22 ಪ್ರಕರಣಗಳು ದಾಖಲಾಗಿವೆ. ಆನಂತರದ ಸ್ಥಾನದಲ್ಲಿ ಕ್ರಮವಾಗಿ ಅಸ್ಸಾಂ (17), ಜಮ್ಮು ಕಾಶ್ಮೀರ (11) ಹಾಗೂ ಉತ್ತರಪ್ರದೇಶ (10) ಇವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಲಾಗಿದೆ. ದೇಶದಾದ್ಯಂತ ದಾಖಲಾಗುತ್ತಿರುವ ಇಂಥ ಪ್ರಕರಣಗಳ ಸಂಖ್ಯೆಯಲ್ಲಿ (93 ಪ್ರಕರಣ) ಕಳೆದ ವರ್ಷ ಶೇ 25ರಷ್ಟು ಏರಿಕೆಯಾಗಿದೆ.
ದೇಶದ್ರೋಹದ ಒಟ್ಟಾರೆ 229 ಪ್ರಕರಣಗಳು ತನಿಖೆಯ ಹಂತದಲ್ಲಿದ್ದು 70 ಪ್ರಕರಣಗಳ ತನಿಖೆಯನ್ನು ಪೂರ್ಣಗೊಳಿಸಲು ಮಾತ್ರ ಪೊಲೀಸರಿಗೆ ಸಾಧ್ಯವಾಗಿದೆ. ಶೇ 69.43 ಪ್ರಕರಣಗಳ ತನಿಖೆ ಬಾಕಿ ಉಳಿದಿದೆ. ಕೋರ್ಟ್‌ ವಿಚಾರಣೆಗೆ ಬಂದಿದ್ದ 116 ಪ್ರಕರಣಗಳಲ್ಲಿ 30 ಪ್ರಕರಣಗಳು ಮಾತ್ರ ಇತ್ಯರ್ಥಗೊಂಡಿವೆ. ಅಲ್ಲಿಯೂ ಶೇ 74.1ರಷ್ಟು ಪ್ರಕರಣಗಳ ವಿಚಾರಣೆ ಬಾಕಿ ಉಳಿದಿದೆ. ಕಳೆದ ವರ್ಷ ದಾಖಲಾಗಿರುವ ಒಟ್ಟಾರೆ ಪ್ರಕರಣಗಳಲ್ಲಿ 40 ಪ್ರಕರಣಗಳು ಮಾತ್ರ ವಿಚಾರಣೆಯ ಹಂತಕ್ಕೆ ಬಂದಿವೆ.

ಇತ್ತೀಚಿನ ಸುದ್ದಿ

ಜಾಹೀರಾತು