1:09 PM Tuesday26 - January 2021
ಬ್ರೇಕಿಂಗ್ ನ್ಯೂಸ್
ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!…

ಇತ್ತೀಚಿನ ಸುದ್ದಿ

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕ್ಯಾಪ್ಟನ್ ಕೂಲ್ ಗುಡ್ ಬೈ

August 15, 2020, 3:05 PM

ನವದೆಹಲಿ(reporterkarnataka News)

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಎಂ.ಎಸ್.ಧೋನಿ ಗುಡ್ ಬೈ ಹೇಳಿದ್ದಾರೆ. ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂಎಸ್ ಧೋನಿ ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್‌ನಿಂದ ದೂರ ಉಳಿದಿದ್ದರು.
ಭಾರತಕ್ಕೆ ಎರಡು ವಿಶ್ವಕಪ್ ತಂದುಕೊಟ್ಟ ಯಶಸ್ವಿ ನಾಯಕ ಧೋನಿ, ಐಪಿಎಲ್ ನಲ್ಲಿ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ.

2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂಎಸ್ ಧೋನಿ ಪಾದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2007ರ ಟಿ20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಕಪ್ ಗೆದ್ದಿತ್ತು.
ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿರುವ ಎಂಎಸ್ ಧೋನಿ ಅವರು ಐಪಿಎಲ್ ನಲ್ಲಿ ಆಡಲಿದ್ದಾರೆ.
ಎಂಎಸ್ ಧೋನಿ ಅವರು 350 ಏಕದಿನ ಪಂದ್ಯಗಳನ್ನಾಡಿದ್ದು ಪಂದ್ಯವೊಂದರಲ್ಲಿ 183 ರನ್ ಬಾರಿದ್ದಾರೆ. ಇನ್ನು ಮಹತ್ವದ ಐಸಿಸಿ ಟೂರ್ನಿಗಳಾದ ಏಕದಿನ ವಿಶ್ವಕಪ್, ಟಿ20 ವಿಶ್ವಕಪ್ ಮತ್ತು ಚಾಂಪಿಯನ್ ಟ್ರೋಫಿ ಗೆಲ್ಲಿಸಿಕೊಟ್ಟ ಕೀರ್ತಿ ಧೋನಿಯವರದ್ದು.

ಇತ್ತೀಚಿನ ಸುದ್ದಿ

ಜಾಹೀರಾತು