10:22 AM Wednesday27 - January 2021
ಬ್ರೇಕಿಂಗ್ ನ್ಯೂಸ್
ರೇಡಿಯೋ ಸಾರಂಗ್ ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಬೆಂಗ್ರೆ ಬೀಚ್ ಸ್ವಚ್ಛತೆ ಜಾನಪದ ಕ್ರೀಡೆ ಕಂಬಳ ಜನವರಿ ಅಂತ್ಯದಿಂದ ಪ್ರಾರಂಭ: ಸಂಸದ ನಳಿನ್ ಕುಮಾರ್ ಕಟೀಲ್ ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ…

ಇತ್ತೀಚಿನ ಸುದ್ದಿ

ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ

December 4, 2020, 8:18 PM

ಶ್ರೀನಿವಾಸಪುರ (reporterkarnataka news): ರೈತರ ಮೇಲಿನ ದೌರ್ಜನ್ಯ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಶುಕ್ರವಾರ ರಸ್ತೆ ತಡೆ ನಡೆಸಿದರು

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್‌.ಸೂರ್ಯನಾರಾಯಣ ಪ್ರತಿಭಟನೆ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ರೈತರ ಬದುಕಿಗೆ ಸಂಬಂಧಿಸಿದ ನಾಲ್ಕು ಕಾಯ್ದೆಗಳನ್ನು ತಿದ್ದುಪಡಿ ಮಾಡುವುದರ ಮೂಲಕ ಕೇಂದ್ರ ಸರ್ಕಾರ ರೈತ ವಿರೋಧಿ ನಿಲುವು ಪ್ರಕಟಿಸಿದೆ. ಕಾಯ್ದೆ ತಿದ್ದುಪಡಿ ರೈತ ಸಮುದಾಯಕ್ಕೆ ಮರಣ ಶಾಸನವಾಗಿ ಪರಿಣಮಿಸಿದೆ ಎಂದು ಹೇಳಿದರು.

   ರಾಜ್ಯ ರೈತ ಸಂಘದ ತಾಲ್ಲೂಕು ಘಟಮದ ಅಧ್ಯಕ್ಷ ಶ್ರೀರಾಮರೆಡ್ಡಿ ಮಾತನಾಡಿ, ರಾಜ್ಯದ ಕೃಷಿ ಸಚಿವರು ರೈತರ ಆತ್ಮೆಹತ್ಯೆಗಳನ್ನು ಲಘುವಾಗಿ ಪರಿಗಣಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ರೈತರ ಬಗ್ಗೆ ತೀರಾ ಹಗುರವಾಗಿ ಮಾತನಾಡಿದ್ದಾರೆ. ಮುಖ್ಯ ಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, ರೈತರ ಕಷ್ಟದ ಅರಿವಿಲ್ಲದ ಕೃಷಿ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು. 

  ಹಿಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರಸ್ವಾಮಿ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಪಾತಕೋಟ ನವೀನ್‌ ಕುಮಾರ್‌ ಕೇಂದ್ರ ಸರ್ಕಾರದ ರೈತ ವಿರೋಧಿ ನಿಲುವನ್ನು ಖಂಡಿಸಿ ಮಾತನಾಡಿದರು.

  ರೈತ ಸಂಘಟನೆಗಳ ಕಾರ್ಯಕರ್ತರು ಪಟ್ಟಣದ ಎಂಜಿ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ, ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

  ಮುಖಂಡರಾದ ನಾರಾಯಣಸ್ವಾಮಿ, ಅಸ್ಲಾಂ ಪಾಷ, ಮಂಜುನಾಥ್‌ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು