6:22 AM Monday30 - November 2020
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಭೂಮಿ ಕಂಪಿಸಿದ ಅನುಭವ: ಭಯಭೀತರಾದ ಜನ ದಿಕ್ಕೆಟ್ಟು ಓಡಿದರು ಭಾರೀ ಹಿಂಸಾಚಾರ, ವಾಹನಗಳಿಗೆ ಬೆಂಕಿ ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ: ರಾಜ್ಯದ ವಿವಿಧಡೆ ಡಿಸೆಂಬರ್ 1ರಿಂದ ಮಳೆ? ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಗೆಲ್ಲಲು ಕದ್ರಿ ಮಂಜುನಾಥನಿಗೆ ಬಿಜೆಪಿ ಮೊರೆ ಬಿ.ಸಿ.ರೋಡ್ ನಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟನೆಯಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಬಜಾಲ್ ಆದರ್ಶನಗರದ ಹದಗೆಟ್ಟ ಮುಖ್ಯ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಕೊಂಚಾಡಿ ಕಾಶೀ ಮಠದಲ್ಲಿ ತುಳಸಿ ಪೂಜೆ: ಪಂಚಾಮೃತ, ಕ್ಷೀರಾಭಿಷೇಕ ಸಂಪನ್ನ ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಜಾಮೀನು ಕೋರಿ ಹೈಕೋರ್ಟ್ ಗೆ ಮತ್ತೆ ಅರ್ಜಿ ಸಲ್ಲಿಸಿದ ಸ್ಯಾಂಡಲ್ ವುಡ್ ನಟಿ… ಹೈದರಾಬಾದ್ ತಲುಪಿದ ಪ್ರಧಾನಿ ಮೋದಿ: ಬಯೋಟೆಕೆ ಸಂಸ್ಥೆಗೆ ಭೇಟಿ, ವಿಜ್ಞಾನಿಗಳ ಜತೆ ಸಮಾಲೋಚನೆ 

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಸ್ವಾತಂತ್ರ್ಯೋತ್ಸವ: ಜಿಲ್ಲಾ ನ್ಯಾಯಾಧೀಶರಿಂದ ಧ್ವಜಾರೋಹಣ

August 15, 2020, 4:29 AM

ಮಂಗಳೂರು(reporterkarnataka news):

ರಾಜ್ಯ ಹೈಕೋರ್ಟ್ ಹೊರಡಿಸಿದ ಮಾರ್ಗಸೂಚಿಗಳ ಅನ್ವಯ 74ನೆಯ  ಸ್ವಾತಂತ್ರ್ಯೋತ್ಸವವನ್ನು ದ.ಕ.ಜಿಲ್ಲಾ ನ್ಯಾಯಾಲಯದಲ್ಲಿ   ಸರಳವಾಗಿ ಆಚರಿಸಲಾಯಿತು.

ಜಿಲ್ಲಾ ಮೀಸಲು ಪೋಲಿಸ್ ಪಡೆಯ ಆರಕ್ಷಕರಿ೦ದ ಗೌರವ ವಂದನೆ ಸ್ವೀಕರಿಸಿದ ಜಿಲ್ಲೆಯ  ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ 

ಮುರಳೀಧರ ಪೈ ಬಿ.  ಅವರು ರಾಷ್ಟ್ರಧ್ವಜಾರೋಹಣ ಮಾಡಿದರು. ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆಯನ್ನು ನುಡಿಸಲಾಯಿತು. ಬಳಿಕ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕೋವಿಡ್‌  ಯೋಧರನ್ನು  ಗೌರವಿಸುವ ಕಾಯ೯ಕ್ರಮದಲ್ಲಿ  ನ್ಯಾಯಾಲಯದ ನೈಮ೯ಲ್ಯ ಸೇವಕರಾದ ಪೂರ್ಣಿಮಾ ಮತ್ತು ಕಾಂಚನಾ ಅವರನ್ನು ಪ್ರಧಾನ ಜಿಲ್ಲಾ ನ್ಯಾಯಾಧೀಶರು   ಹೂವು ನೀಡಿ ಗೌರವಿಸಿದರು.

ಕೋವಿಡ್‌ 19 ಸೋಂಕಿನಿಂದ ಬಾಧಿತರಾಗಿ ಗುಣಮುಖರಾದ ನ್ಯಾಯಾಲಯದ ಸಿಬ್ಬಂದಿಗಳನ್ನು ಗೌರವಿಸುವ ಕಾಯ೯ಕ್ರಮದಲ್ಲಿ  ಜೆಎಂಎಫ್ಸಿ ನ್ಯಾಯಾಲಯದ ಶಿರಸ್ತೆದಾರ್  ರಾಜೇಶ್ ಎಂ. ಅವರನ್ನು ಹೂವು ನೀಡುವ ಮೂಲಕ ಅಭಿನ೦ದಿಸಲಾಯಿತು.

 ಮಂಗಳೂರು ವಕೀಲರ ಸಂಘದ ಅಧ್ಯಕ್ಷ 

ಎನ್. ನರಸಿಂಹ ಹೆಗ್ಡೆ,  ಕಾರ್ಯದರ್ಶಿ ಎಚ್. ವಿ. ರಾಘವೇಂದ್ರ,  ಖಜಾಂಚಿ ಅರುಣಾ ಬಿ.ಪಿ. ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು