ಇತ್ತೀಚಿನ ಸುದ್ದಿ
ಡಿ.ಕೆ. ರವಿ ಪತ್ನಿ ಕುಸುಮಾಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸಮಕ್ಷದಲ್ಲಿ ಕಾಂಗ್ರೆಸ್ ಸದಸ್ಯತ್ವ
October 4, 2020, 3:08 PM

ಬೆಂಗಳೂರು(reporterkarnataka news) : ಆರ್. ಆರ್. ನಗರ ವಿಧಾನಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಕುಸುಮಾ ಅವರು
ಭಾನುವಾರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನಲ್ಲಿ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಸುಮಾ ಅವರಿಗೆ ಪಕ್ಷದ ಸದಸ್ಯತ್ವ ನೀಡಲಾಯಿತು.
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ , ಹಿರಿಯ ನಾಯಕರಾದ ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾಂಗ್ರೆಸ್ ಕುಸುಮಾ ಅವರ ಹೆಸರನ್ನು ಪಕ್ಷದ ಹೈ ಕಮಾಂಡ್ ಗೆ ರವಾನಿಸುವ ಸಾಧ್ಯತೆಯಿದೆ.
ಕುಸುಮಾ ಅವರು ಆತ್ಮಹತ್ಯೆಗೆ ಶರಣಾದ ಐಎಎಸ್ ಅಧಿಕಾರಿ ಡಿ ಕೆ ರವಿ ಅವರ ಪತ್ನಿ