11:22 PM Friday4 - December 2020
ಬ್ರೇಕಿಂಗ್ ನ್ಯೂಸ್
ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ

ಇತ್ತೀಚಿನ ಸುದ್ದಿ

ಡಿ.ಕೆ.ರವಿ ಪತ್ನಿ ಕುಸುಮಾಗೆ ಕಾಂಗ್ರೆಸ್ ಟಿಕೆಟ್ ಸಿಗುತ್ತೋ? ಇಲ್ವೋ?: ಕೆಪಿಸಿಸಿ ಅಧ್ಯಕ್ಷರು ಏನು ಹೇಳುತ್ತಾರೆ?

October 3, 2020, 1:29 PM

ಬೆಳಗಾವಿ(reporterkarnataka news): ದಿವಂಗತ ಐಎಎಸ್ ಅಧಿಕಾರಿ ಡಿ. ಕೆ. ರವಿ ಅವರ ಪತ್ನಿ ಕುಸುಮಾ ಅವರಿಗೆ ಆರ್. ಆರ್. ನಗರ ವಿಧಾನಸಭೆ ಕ್ಷೇತ್ರದಿಂದ ಟಿಕೆಟ್ ನೀಡುವ ಸಂಬಂಧ ಇದುವರೆಗೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಇದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್  ಅವರ ಸ್ಪಷ್ಟೋಕ್ತಿ.

ಟಿಕೆಟ್ ಬಯಸಿ ಈಗಾಗಲೇ ಏಳು ಎಂಟು ಅಭ್ಯರ್ಥಿಗಳು ಮನವಿ ಪತ್ರ ಸಲ್ಲಿಸಿದ್ದಾರೆ. ಈ ಸಂಬಂಧ ಗಮನ ಹರಿಸಲು ರಾಮ ಲಿಂಗಾ ರೆಡ್ಡಿ ನೇತೃತ್ವದಲ್ಲಿ ಸಮಿತಿ ಕೂಡ ರಚಿಸಲಾಗಿದೆ. ಈ ಸಮಿತಿ ಅಭಿಪ್ರಾಯ ಆಧರಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿವಕುಮಾರ್ ಹೇಳಿದ್ದಾರೆ.

ಕುಸುಮಾ ಅವರು ಚುನಾವಣೆಗೆ  ನಿಲ್ಲಲ್ಲು ನಮ್ಮ ತಕರಾರಿಲ್ಲ. ಆದರೆ ಡಿ. ಕೆ. ರವಿ ಅವರ ಭಾವಚಿತ್ರ ಬಳಸಿದರೆ ಮಾತ್ರ ಸುಮ್ಮನಿರಲ್ಲ ಎಂದು ಡಿ. ಕೆ. ರವಿ ತಾಯಿ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು