ಇತ್ತೀಚಿನ ಸುದ್ದಿ
ಡಿಕೆಶಿ ಮನೆಗೆ ಸಿಬಿಐ ದಾಳಿ ವಿರೋಧಿಸಿ ಟೈಯರ್ ಸುಟ್ಟು ಪ್ರತಿಭಟನೆ: ಮಿಥುನ್ ರೈ ಸಹಿತ ಹಲವರ ಬಂಧನ
October 5, 2020, 4:58 PM

ಮಂಗಳೂರು(reporterkarnataka news)
ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ಮನೆ ಮೇಲೆ ನಡೆದ ಸಿಬಿಐ ದಾಳಿ ಖಂಡಿಸಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ನಗರ ಮಲ್ಲಿ ಕಟ್ಟೆಯ ಕಾಂಗ್ರೆಸ್ ಭವನ ಮುಂಭಾಗ ಸೋಮವಾರ ಪ್ರತಿಭಟನೆ ನಡೆಯಿತು.

ಜಿಲ್ಲಾ ಯುವ ಕಾಂಗೇಸ್ ಅಧ್ಯಕ್ಷ ಮಿಥುನ್ ರೈ ಮಾತನಾಡಿ, ಡಿಕೆಶಿ ಮನೆಯ ಮೇಲೆ ದಾಳಿ ರಾಜಕೀಯ ದುರುದ್ದೇಶದಿಂದ ಕೂಡಿದೆ.ಇದನ್ನು ಜಿಲ್ಲಾ ಯುವ ಕಾಂಗ್ರೆಸ್ ಖಂಡಿಸುತ್ತದೆ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ರಸ್ತೆ ತಡೆ ಹಾಗೂ ರಸ್ತೆ ಮಧ್ಯೆ ಟೈಯರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

ಯಾವುದೇ ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ ಮಿಥುನ್ ರೈ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಪೋರೇಟರ್ ಪ್ರವೀಣ್ ಚಂದ್ರ ಆಳ್ವ, ಕಾರ್ಪೋರೇಟರ್ ಎಸಿ ವಿನಯ್ ರಾಜ್ ಮತ್ತಿರರು ಉಪಸ್ಥಿತರಿದ್ದರು.