ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಬಿರುಸಿನ ಮಳೆ: ಕೊಡಗಿಗೆ ಇಂದು ಆರ್.ಅಶೋಕ್, ಡಿ. ಕೆ. ಶಿವಕುಮಾರ್ ಭೇಟಿ
August 9, 2020, 4:08 AM

ಬೆಂಗಳೂರು(reporterkarnataka news):
ರಾಜ್ಯದಲ್ಲಿ ಮಳೆ ಬಿರುಸು ಪಡೆದುಕೊಂಡಿದೆ. ಮುಖ್ಯವಾಗಿ ಮಲೆನಾಡು ಮತ್ತು ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಉಡುಪಿ ಜಿಲ್ಲೆಯಲ್ಲಿ ಸ್ವರ್ಣಾ ಮತ್ತು ಸೀತಾ ನದಿ ತುಂಬಿ ಹರಿಯುತ್ತಿದೆ.
ಕೊಡಗಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗಿದೆ. ಕಾವೇರಿಯಲ್ಲಿ ನೀರಿನ ಮಟ್ಟ ಕಡಿಮೆಯಾಗಿಲ್ಲ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಈ ಮಧ್ಯೆ ತೀವ್ರ ಭೂ ಕುಸಿತ ಸಂಭವಿಸಿರುವ ಕೊಡಗಿನ ಭಾಗಮಂಡಲಕ್ಕೆ ಕಂದಾಯ ಸಚಿವ ಆರ್. ಅಶೋಕ್ ಇಂದು ಭೇಟಿ ನೀಡಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಇಂದು ಕೊಡಗಿಗೆ ಭೇಟಿ ನೀಡಲಿದ್ದಾರೆ.
ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜ್ಯದ ಅಣೆಕಟ್ಟುಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.