ಇತ್ತೀಚಿನ ಸುದ್ದಿ
ಸರಕಾರದ ಶಾಂತಿಕ್ರಮಗಳಿಗೆ ಪೂರ್ಣ ಬೆಂಬಲ:ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್
August 12, 2020, 6:28 AM

ಬೆಂಗಳೂರು(reporterkarnatakanews):
ನಗರದ ಗಲಭೆಗ್ರಸ್ತ ಪ್ರದೇಶಗಳಲ್ಲಿ ಶಾಂತಿ ಮರು ಸ್ಥಾಪನೆ ಸಂಬಂಧ ರಾಜ್ಯ ಸರ್ಕಾರ ಕೈಗೊಳ್ಳುವ ಎಲ್ಲ ಕ್ರಮಗಳನ್ನು ಕಾಂಗ್ರೆಸ್ ಬೆಂಬಲಿಸಲಿದೆ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಅವರು ಟ್ವೀಟ್ ಮಾಡಿದ್ದಾರೆ.
ಯಾರೂ ಕೂಡ ತಾಳ್ಮೆ ಕಳೆದುಕೊಳ್ಳಬಾರದು. ಯಾರ ಮೇಲೂ ಆಕ್ರಮಣ ನಡೆಸಿದರೂ ಅದು ತಪ್ಪು ಎಂದು ಡಿ ಕೆ ,ಶಿವಕುಮಾರ್ ಹೇಳಿದ್ದಾರೆ. ಪಕ್ಷದ ನಾಯಕರು ಘಟನೆಯ ಬಗ್ಗೆ ಎಚ್ಚರಿಕೆಯ ಪ್ರತಿಕ್ರಿಯೆ ನೀಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಗಲಭೆ ಗ್ರಸ್ತ ಡಿ ಜೆ ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪ್ರದೇಶಗಳಿಗೆ ಭೇಟಿ ನೀಡುವುದಾಗಿಯೂ ಶಿವಕಮಾರ್ ತಿಳಿಸಿದ್ದಾರೆ.