10:32 AM Tuesday16 - April 2024
ಬ್ರೇಕಿಂಗ್ ನ್ಯೂಸ್
ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ… ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ… ಕಾಡುಕೋಣ ದಾಳಿ: ಯುವ ರೈತ ಗಂಭೀರ ಗಾಯ; ಮಂಗಳೂರು ಆಸ್ಪತ್ರೆಗೆ ದಾಖಲು

ಇತ್ತೀಚಿನ ಸುದ್ದಿ

ಡ್ರಗ್ಸ್ ನಿಂದ ದೂರವಿದ್ದು ಉಜ್ವಲ ಭವಿಷ್ಯ ಕಟ್ಟಿಕೊಳ್ಳಿ: ವಿದ್ಯಾರ್ಥಿಗಳಿಗೆ ಎಸಿಪಿ ಗೀತಾ ಕುಲಕರ್ಣಿ ಕಿವಿಮಾತು

20/12/2023, 23:19

ಮಂಗಳೂರು(reporterkarnataka.com): ಡ್ರಗ್ಸ್ ಸೇವನೆ,ಮಾರಾಟ ಶಿಕ್ಷಾರ್ಹ ಅಪರಾಧವಾಗಿದೆ. ಡ್ರಗ್ಸ್ ವ್ಯಸನಕ್ಕೆ ಸಹಾಯ ಮಾಡಿದರೂ ನೀವು ಅಪರಾಧಿಗಳಾಗಿರುತ್ತೀರಾ. ಆದ್ದರಿಂದ, ಡ್ರಗ್ಸ್ ನಿಂದ ದೂರವಿದ್ದು ಉಜ್ವಲ ಭವಿಷ್ಯ ಕಟ್ಟಿಕೊಳ್ಳಿ ಎಂದು ಎಸಿಪಿ ಗೀತಾ ಕುಲಕರ್ಣಿ ಹೇಳಿದರು.


ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕೆಪಿಟಿಯಲ್ಲಿ
ಕರ್ನಾಟಕ ರಾಜ್ಯ ಪೊಲೀಸ್, ಮಂಗಳೂರು ನಗರ ಪೊಲೀಸ್, ಮಂಗಳೂರು ಸಂಚಾರ ಉಪ ವಿಭಾಗ ಹಾಗೂ ಸಂಚಾರಿ ಪೂರ್ವ ಠಾಣೆ ವತಿಯಿಂದ ನಡೆದ ಅಪರಾಧ ಮಾಸಚರಣೆ 2023 ಮಾದಕ ದ್ರವ್ಯ ವಿರುದ್ಧ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕದ್ರಿ ಠಾಣಾ ಇನ್ಸ್ಪೆಕ್ಟರ್ ಗೋಪಾಲ ಕೃಷ್ಣ ಭಟ್ ಮಾತನಾಡಿ, ನಿಮ್ಮ ಮನಸಿನಲ್ಲಿ ಯಾವುದೇ ಯಾತನೆಗಳಿದ್ದರೂ ಅದನ್ನು ನಿಮ್ಮ ತಂದೆ, ತಾಯಿ, ಶಿಕ್ಷಕರಲ್ಲಿ, ಅಥವಾ ಆತ್ಮೀಯರಲ್ಲಿ ಹಂಚಿಕೊಳ್ಳಿ, ಮಾದಕ ವ್ಯಸನಕ್ಕೆ ದಾಸರಾಗಿ,ಆತ್ಮಹತ್ಯೆಗೆ ಬಲಿಯಾಗಬೇಡಿ ಎಂದು ಕಿವಿ ಮಾತು ಹೇಳಿದರು.

ಎಲೆಕ್ಟ್ರಿಕಲ್ ಮೇಕನಿಕ್ ಉಪನ್ಯಾಸಕಿ ಸುರೇಖಾ,ಎಸ್ ಐ ವಿಜಯ್ ಮತ್ತಿರರ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು