12:23 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಮಾಸ್ಕ್, ವೆಂಟಿಲೇಟರ್ ಖರೀದಿಯಲ್ಲಿ ಭ್ರಷ್ಟಾಚಾರ:ಬಿಜೆಪಿ ಆಡಳಿತ ವಿರುದ್ಧ ಡಿವೈಎಫ್ ಐ ಆರೋಪ

August 25, 2020, 3:14 PM

ಮಂಗಳೂರು(reporterkarnataka news):

ಸರಕಾರಿ ಆಸ್ಪತ್ರೆ ಬಲಪಡಿಸಲು, ಖಾಸಗೀ ಆಸ್ಪತ್ರೆ ‌ನಿಯಂತ್ರಿಸಲು, ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಹಾಗೂ ಕೊರೊನಾ ಹೆಸರಲ್ಲಿ ಖಾಸಗೀ ಆಸ್ಪತ್ರೆಗಳ ಲೂಟಿಕೋರ ನೀತಿ ನಿಲ್ಲಿಸಲು ಒತ್ತಾಯಿಸಿ ಬೆಂಗರೆ ಪ್ರದೇಶದ ನಗರ ಆರೋಗ್ಯ ಕೇಂದ್ರ ಎದುರು ಡಿವೈಎಫ್ ಐ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಸರಕಾರಿ ಆಸ್ಪತ್ರೆಯ ಅವ್ಯವಸ್ಥೆಯನ್ನು ವಿರೋಧಿಸಿ, ಎಲ್ಲರಿಗೂ ಸಮಾನ ಗುಣಮಟ್ಟದ ಉಚಿತ ಚಿಕಿತ್ಸೆಗಾಗಿ ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು.

ಪ್ರತಿಭಟನಾಕಾರರ ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಕೊರೊನಾ ರೋಗದ ವಿರುದ್ದ ಸರಕಾರಗಳು ಕೈಗೊಂಡ ಪರಿಹಾರ ಕ್ರಮಗಳೆಲ್ಲಾ ವಿಫಲಗೊಂಡಿದೆ. ಕೊರೊನಾ ಕಾಲಘಟ್ಟವನ್ನು ಬಳಸಿಕೊಂಡು ನಮ್ಮನ್ನಾಳುವ ಕೇಂದ್ರ ಸರಕಾರ ಇದ್ದ ನೀತಿಗಳನ್ನು ತಿದ್ದುಪಡಿ ಮಾಡಿದಲ್ಲದೆ ಸಾರ್ವಜನಿಕ ರಂಗ ಉದ್ದಿಮೆಗಳನ್ನೆಲ್ಲಾ ಶ್ರೀಮಂತ ಧಣಿಗಳಿಗೆ ಸಂಪೂರ್ಣ ಮಾರಲು ಸಿದ್ಧತೆ ನಡೆಸಿದೆ ಎಂದರು.

ರಾಜ್ಯ ಸರಕಾರ ಕೊರೊನಾ ಹೆಸರಲ್ಲಿ ಮಾಸ್ಕ್ , ವೆಂಟಿಲೇಟರ್ ಇನ್ನಿತರ ಸಾಮಗ್ರಿಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆಸಿದೆ ಮತ್ತು ಖಾಸಗೀ ಆಸ್ಪತ್ರೆಗಳಿಗೆ ದುಬಾರಿ ದರ ವಸೂಲಿ ಮಾಡಲು ಅವಕಾಶ ಮಾಡಿಕೊಟ್ಟಿದೆ ಎಂದು ಅವರು ಆರೋಪಿಸಿದರು.

ಮಂಗಳೂರು ಮಹಾನಗರ ಪಾಲಿಕೆ ಆಡಳಿತ ಈ ಸಂದರ್ಭದಲ್ಲಿ ಕಳೆದ ಎರಡು ತಿಂಗಳುಗಳಿಂದ ಕುಡಿಯುವ ನೀರನ್ನು ಶುದ್ದೀಕರಿಸದೆ, ಅದರಲ್ಲಿರುವ ವಿಷಕಾರಿ ಬ್ಯಾಕ್ಟೀರಿಯಾ ಗಳನ್ನು ನಾಶಪಡಿಸದೆ ವಿತರಿಸಿ ಜನರ ಆರೋಗ್ಯದ ಜೊತೆ ಚೆಲ್ಲಾಟವಾಡಿದೆ. ಬಿಜೆಪಿ ಸರಕಾರದ ಈ ಆಡಳಿತ ನೀತಿಯು ಕೊರೊನಾಕ್ಕಿಂತಲೂ ಅಪಾಯಕಾರಿಯಲ್ಲದೆ ಮತ್ತಿನ್ನೇನು ಎಂದು ಪ್ರಶ್ನಿಸಿದರು. 

ಡಿವೈಎಫ್ ಐ ಜಿಲ್ಲಾದ್ಯಕ್ಷ ಬಿ.ಕೆ. ಇಮ್ತಿಯಾಜ್ ಮಾತನಾಡಿ, ಬೆಂಗರೆ  ತೀರಾ ಹಿಂದುಳಿದ ಪ್ರದೇಶ ಇಲ್ಲಿನ ನಿವಾಸಿಗಳನ್ನು ಮೂಲಭೂತ ಸೌಕರ್ಯಗಳಿಂದ ವಂಚಿಸಲಾಗಿದೆ. ಕನಿಷ್ಟ  ಹಕ್ಕು ಪತ್ರ , ನೀರು , ಆರೋಗ್ಯ ಕಾಳಜಿಯನ್ನು ನೀಡಲು ಸಾದ್ಯವಾಗಿಲ್ಲ. ಇರುವ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕು. ದಿನದ 24 ಗಂಟೆ ವೈದ್ಯರು ಸಹಿತ ನುರಿತ ಸಿಬ್ಬಂದಿಗಳನ್ನು ನೇಮಿಸಬೇಕು ಎಂದು ಒತ್ತಾಯಿಸಿದರು.

ಡಿವೈಎಫ್ಐ  ಜಿಲ್ಲಾ ಮುಖಂಡರಾದ ಸುನೀಲ್ ತೇವುಲ, ನೌಶಾದ್ ಬೆಂಗರೆ, ಬೆಂಗರೆ ಗ್ರಾಮ ಸಮಿತಿ ಅದ್ಯಕ್ಷ ಹನೀಫ್ ಬೆಂಗರೆ ಕಾರ್ಯದರ್ಶಿ ರಿಜ್ವಾನ್, ಬಿಲಾಲ್, ನಾಸಿರ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು