11:10 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಎಳ್ಳಾರೆಯ ಸದಾಶಿವ ಪ್ರಭುಗೆ ಐಎಎಸ್ ಗ್ರೇಡ್:ವಾಯುಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅಧಿಕಾರಿ!

10/08/2022, 10:52

ಕಾರ್ಕಳ(reporterkarnataka.com): ಉಡುಪಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಎಳ್ಳಾರೆ ಸದಾಶಿವ ಪ್ರಭು ಅವರು  ಐಎಎಸ್ ಅಧಿಕಾರಿಯಾಗಿ ಪದೋನ್ನತಿ ಪಡೆದಿದ್ದಾರೆ. ದೇಶದ 75 ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರಕಾರವು ಅಧಿಸೂಚನೆ ಹೊರಡಿಸಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಳ್ಳಾರೆಯ ಬಿ. ಸದಾಶಿವ ಪ್ರಭು ವಾಯುಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಳಿಕ ಕಿರಿಯ ವಾರಂಟ್ ಅಧಿಕಾರಿಯಾಗಿ ನಿವೃತ್ತಿ ಹೊಂದಿದರು. ನಂತರ , 2005ರಲ್ಲಿ ಮಂಗಳೂರಿನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ  ನೇಮಕಾತಿ ಹೊಂದಿದರು. 2006 ಬ್ಯಾಚ್ ನ  ಕೆಎಎಸ್ ಪರೀಕ್ಷೆಯಲ್ಲಿ ಉತೀರ್ಣರಾಗಿ, 2008ರಲ್ಲಿ ಸಹಾಯಕ ಅಯುಕ್ತರಾಗಿ  ಕೆಎಎಸ್ ಸೇವೆಗೆ ಸೇರ್ಪಡೆಗೊಂಡರು.   

ಬಿಜಾಪುರದಲ್ಲಿ ಪ್ರಾಯೋಗಿಕ ತರಬೇತಿ ಮುಗಿಸಿದ ಬಳಿಕ ಅವಿಭಾಜಿತ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಹಾಯಕ ಕಮಿಷನರ್ ಅಗಿ  ,ಬಳಿಕ ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದರು. ನಂತರ ಕರ್ನಾಟಕ ಸರಕಾರದ ಕಂದಾಯ ಇಲಾಖೆಯ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಬಳಿಕ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು