8:49 PM Thursday21 - January 2021
ಬ್ರೇಕಿಂಗ್ ನ್ಯೂಸ್
ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್…

ಇತ್ತೀಚಿನ ಸುದ್ದಿ

ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನ ಮಾಲೀಕ ವಕ್ವಾಡಿ ಪ್ರವೀಣ್ ಶೆಟ್ಟಿಗೆ ದುಬೈ ಸರಕಾರದ ಗೋಲ್ಡನ್ ವೀಸಾ

January 8, 2021, 11:08 PM

ಮಂಗಳೂರು (reporterkarnataka news): ಕರಾವಳಿಯ ಕುಂದಾಪುರ ಮೂಲದ ದುಬೈ ಉದ್ಯಮಿ, ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನ ಮಾಲೀಕ ವಕ್ವಾಡಿ ಪ್ರವೀಣ್ ಶೆಟ್ಟಿ ಅವರಿಗೆ ದುಬೈ ಸರಕಾರ 10 ವರ್ಷಗಳ ಅವಧಿಗೆ ಗೋಲ್ಡನ್ ವೀಸಾ ನೀಡಿ ಗೌರವಿಸಿದೆ. ಕೊರೊನಾದ ಸಂಕಷ್ಟದ ಕಾಲದಲ್ಲಿ ಅವರು ಸಲ್ಲಿಸಿದ ಅನುಪಮ ಸೇವೆಯ ಹಿನ್ನೆಲೆಯಲ್ಲಿ ಈ ಗೌರವ ಸಂದಾಯವಾಗಿದೆ.

ಫಾರ್ಚೂನ್ ಸಮೂಹದ 7 ಹೋಟೆಲ್ ಗಳು ದುಬೈಯಲ್ಲಿ ಪ್ರಸಕ್ತ ಕಾರ್ಯನಿರ್ವಹಿಸುತ್ತಿವೆ. ಕಳೆದ ಅಕ್ಟೋಬರ್‌ನಲ್ಲಿ ಮತ್ತೊಂದು ಫೋರ್ ಸ್ಟಾರ್ ಹೋಟೆಲ್ ಆರಂಭಿಸಲಾಗಿದೆ.  ದುಬೈ ಸರಕಾರದ ಪ್ರವಾಸೋದ್ಯಮ ಡಿಜಿಎಂ ಹೆಲಾಲ್ ಸಯೀದ್ ಅಲ್ ಮರ್ರಿ ಈ ಹೋಟೆಲ್ ಗೆ ಭೇಟಿ ನೀಡಿದ್ದು,  ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಭಾರತೀಯ ಮೂಲದ ಸ್ಟಾರ್ ಹೋಟೆಲ್ ಗಳಿಗೆ ಸಾಮಾನ್ಯವಾಗಿ ಅಲ್ಲಿನ ಶೇಖ್ ಗಳು ಭೇಟಿ ನೀಡುವುದಿಲ್ಲ. ಕೊರೊನಾ ಬಿಕ್ಕಟ್ಟಿನ ನಡುವೆ ಹೋಟೆಲ್ ಸ್ಥಾಪಿಸಿ ಸಾವಿರಾರು ಮಂದಿಗೆ ಉದ್ಯೋಗ ನೀಡಿದ ಬಗ್ಗೆ ಅಲ್ಲಿನ ಸರಕಾರ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ವಕ್ವಾಡಿ ಪ್ರವೀಣ್ ಶೆಟ್ಟಿ ಅವರಿಗೆ ಭಾರಿ ಕೊಡುಗೆ ನೀಡಿದೆ.





ಕೊರೊನಾದ ಸಂಕಷ್ಟದ ಕಾಲದಲ್ಲಿ ಇಂತಹ ಭವ್ಯ ಹೋಟೆಲ್ ನಿರ್ಮಿಸಿದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಮರ್ರಿ, ಸರಕಾರದಿಂದ ಯಾವುದೇ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು