2:08 PM Tuesday24 - November 2020
ಬ್ರೇಕಿಂಗ್ ನ್ಯೂಸ್
ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ: ನಾಳೆ ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಚರ್ಚೆ ರಾಜಕೀಯ ರಂಗದಲ್ಲಿ ಕುತೂಹಲ ಕೆರಳಿಸಿದ ಸಚಿವ ಸೋಮಣ್ಣ ದಿಢೀರ್ ದೆಹಲಿ ಭೇಟಿ

ಇತ್ತೀಚಿನ ಸುದ್ದಿ

ಮಾಹಿತಿ ಹಕ್ಕು ಕಾಯಿದೆ ಉಲ್ಲಂಘನೆ: ತಾಪಂ ಎಫ್ ಡಿಎ ವಿರುದ್ಧ ಎಫ್ ಐಆರ್ ದಾಖಲು

October 26, 2020, 9:58 AM

ಶ್ರೀನಿವಾಸಪುರ(reporterkarnataka news) : 

ಮಾಹಿತಿ ಹಕ್ಕು ಅಧಿನಿಯಮದಡಿ ಕೇಳಲಾಗಿದ್ದ ಮಾಹಿತಿ ನೀಡಲು ವಿಫಲವಾದ ಹಿನ್ನೆಲೆಯಲ್ಲಿ, ತಾಲೂಕು ಪಂಚಾಯಿತಿ ಪ್ರಥಮ ದರ್ಜೆ ಸಹಾಯಕ ಎಸ್‌. ಮಂಜುನಾಥ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಪಂಚಾಯಿತಿ ಕಾರ್ಯಾಲಯಕ್ಕೆ ಸಂಬಂಧಿಸಿದಂತೆ ಸ್ಟಾಂಪ್‌ ಡ್ಯೂಟಿ ಅಡಿಯಲ್ಲಿ ಬಿಡುಗಡೆಯಾಗಿರುವ ಹಣ ಹಾಗೂ ವೆಚ್ಚಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳು ಹಾಗೂ ಅಗತ್ಯ ಮಾಹಿತಿ ನೀಡುವಂತೆ ಕೋರಿ ಪಟ್ಟಣದ ಜಾಕೀರ್‌ ಹುಸೇನ್‌ ಮೊಹಲ್ಲಾದ ಶಬ್ಬೀರ್ ಅಹಮ್ಮದ್ ಅವರು 2016ರಲ್ಲಿ ಮಾಹಿತಿ ಹಕ್ಕು ಅರ್ಜಿ ಸಲ್ಲಿಸಿದ್ದರು.

ತಾಲೂಕು ಪಂಚಾಯಿತಿ ಕಾರ್ಯಾಲಯ ಲೆಕ್ಕ ಶಾಖಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 

ಎಸ್. ಮಂಜುನಾಥ ಅವರಲ್ಲಿ ಮಾಹಿತಿಯನ್ನು ಅರ್ಜಿದಾರರಿಗೆ ಒದಗಿಸುವಂತೆ ಕಚೇರಿಯಿಂದ ಹಾಗೂ ಕರ್ನಾಟಕ ಮಾಹಿತಿ ಆಯೋಗದಿಂದ ಸುಮಾರು ಬಾರಿ ಸೂಚನೆ ನೀಡಿದರೂ

ಮಂಜುನಾಥ ಮಾಹಿತಿಯನ್ನು ಬದಗಿಸಿರುವುದಿಲ್ಲ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಮಾಹಿತಿ ಆಯೋಗ

ಪ್ರಕರಣದಲ್ಲಿ ಕೋರಿರುವ ಮಾಹಿತಿ / ದಾಖಲೆ ಸಂಬಂಧ ಕರ್ನಾಟಕ ಪಬ್ಲಿಕ್ ರೆಕಾಡ್ ಆಕ್ಟ್ 2010 ಮತ್ತು ಕರ್ನಾಟಕ ಪಬ್ಲಿಕ್ ರೆಕಾರ್ಡ್ ರೂಲ್ಸ್ 2013 ರನ್ವಯ ಈ ಮಾಹಿತಿಗೆ ಸಂಬಂಧಿಸಿದ ಕಡತ ನಿರ್ವಹಿಸಿದ  ಎಸ್. ಮಂಜುನಾಥ ವಿರುದ್ದ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ ದಾಖಲಿಸುವಂತೆ ಆದೇಶಿಸಿದೆ.

ಇದೀಗ ಮಾಹಿತಿ ಹಕ್ಕು ಆಯೋಗ,  ಅಗತ್ಯ ಮಾಹಿತಿ ಒದಗಿಸಲು ವಿಫಲವಾಗಿರುವ ಎಸ್‌.ಮಂಜುನಾಥ ಅವರ ವಿರುದ್ಧ ಎಫ್ ‌ಐ ಆರ್ ದಾಖಲಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌ ಅವರಿಗೆ ಸೂಚಿಸಿತ್ತು. ಅದರಂತೆ ಎಸ್‌.ಆನಂದ್‌ ಶ್ರೀನಿವಾಸಪುರ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನ ಅನ್ವಯ ಎಸ್‌.ಮಂಜುನಾಥ ವಿರುದ್ಧ ಎಫ್‌ ಐ ಆರ್‌ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು