11:09 AM Friday4 - December 2020
ಬ್ರೇಕಿಂಗ್ ನ್ಯೂಸ್
ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ… ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಮೀನಿನ ಚಿಪ್ಸ್,  ಮೀನಿನ ಮೌಲ್ಯವರ್ಧಿತ ಉತ್ಪನ್ನಕ್ಕೆ ಆದ್ಯತೆ:  ಏನೆಲ್ಲ ಸೌಲಭ್ಯ ಸಿಗಲಿದೆ? 

October 6, 2020, 8:54 PM

ಮಂಗಳೂರು (reporterkarnataka news): ಪೂರ್ವಪರ ಮಾಹಿತಿ ಪಡೆದು, ವ್ಯಾಪಾರ ಮಾಡುವ ಸಾಮಾರ್ಥ್ಯವುಳ್ಳ

ಸಮರ್ಥ ಮೀನಿನ ಉತ್ಪನ್ನಗಳ ವಿತರಕರನ್ನು ಆಯ್ಕೆ ಮಾಡಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
    ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‍ಹಾಲ್‍ನಲ್ಲಿ ನಡೆದ ಮೀನಿನ ಚಿಪ್ಸ್ ಉತ್ಪಾದನೆಯ ವಿತರಕರ ಸಭೆಯನ್ನುದ್ಧೇಶಿಸಿ ಅವರು ಮಾತನಾಡಿದರು.  
    ಮೀನುಗಾರಿಕೆ ಉದ್ಯಮದಲ್ಲಿ ತೊಡಗಿಸಿಕೊಳ್ಳುವ ಸಣ್ಣ  ಉದ್ದಿಮೆದಾರರಿಗೆ ಮೀನು ಮತ್ತು ಮೀನಿನ ಮೌಲ್ಯವರ್ಧಿತ ಉತ್ಪನ್ನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಅವಶ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು  ಮೀನಿನ ಚಿಪ್ಸ್ ಮತ್ತು ಮೀನಿನ ಮಸಾಲೆ ಪದಾರ್ಥಗಳನ್ನು ಈಗಾಗಲೇ ಬಿಡುಗಡೆಗೊಳಿಸಿದ್ದು,  ಮೀನಿನ ಉತ್ಪನ್ನ ಪೂರೈಕೆ ಹಾಗೂ ವಿತರಣೆಗೆ ಹೆಚ್ಚು ಒತ್ತು ನೀಡಬೇಕು ಎಂದರು.
     ಜಿಲ್ಲೆಯಲ್ಲಿ ಮೀನಿನ ಚಿಪ್ಸ್ ಉತ್ಪಾದನೆಯನ್ನು ವ್ಯಾಪಕವಾಗಿ ವಿಸ್ತರಿಸುವ ನಿಟ್ಟಿನಲ್ಲಿ ವಿತರಕರ ಪಾತ್ರ ತುಂಬಾ ಮುಖ್ಯವಾಗಿರುತ್ತದೆ. ಹಾಗಾಗಿ ಪರಿಣತಿಯುಳ್ಳ, ಷರತ್ತು ಮತ್ತು ನಿಬಂಧನೆಗಳನ್ನು ಪಾಲಿಸುವಂತಹ ಅರ್ಹ ವ್ಯಕ್ತಿಯನ್ನು ವಿತರಕರನ್ನಾಗಿ ನೇಮಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮೀನುಗಾರಿಕೆ ಸಹಕಾರಿ ಮಹಾಮಂಡಳಿಗೆ ಸಚಿವರು ಸೂಚಿಸಿದರು.  ಈಗಾಗಲೇ ಬೆಂಗಳೂರಿನಲ್ಲಿ ಮೀನಿನ ಚಿಪ್ಸ್ ಉತ್ಪಾದನೆಯಾಗುತ್ತಿದ್ದು, ಇನ್ನು ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಮಾರುಕಟ್ಟೆಗಳಲ್ಲಿ ಈ ಉತ್ಪನ್ನ ದೊರಯಲಿದೆ ಎಂದರು. 
     ಮತ್ಸ್ಯದರ್ಶಿನಿ ಮಳಿಗೆಗಳಿಗೆ ಮೀನು ಹಾಗೂ ಮೀನಿನ ಉತ್ಪನ್ನಗಳನ್ನು ಸರಬರಾಜು ಮಾಡುವುದರ ಬಗ್ಗೆ ಮತ್ಸ್ಯಬಂಧನ ಪ್ರೈವೆಟ್ ಲಿಮಿಟೆಡ್ ಜೊತೆ ಒಡಂಬಡಿಕೆ ಮಾಡಿಕೊಂಡು ಪ್ರತಿಯನ್ನು  ಹಸ್ತಾಂತರಿಸಲಾಯಿತು. 
   ಇದೇ ಸಂಧರ್ಭದಲ್ಲಿ  ಕರಾವಳಿ ಪಡೆಯ ಮೂಲಕ ಮೀನುಗಾರರ ಚಲವಲನ ದಾಖಲಿಸುವ ಮೊಬೈಲ್ ಆಪ್‍ನ್ನು ಸಚಿವರು ಬಿಡುಗಡೆಗೊಳಿಸಿದರು. 
    ಕರ್ನಾಟಕ ರಾಜ್ಯ ಮೀನುಗಾರಿಕೆ ಸಹಕಾರಿ ಮಹಾಮಂಡಳಿ ವ್ಯವಸ್ಥಾಪಕ ನಿರ್ದೇಶಕ ಎಂ.ಎಲ್. ದೊಡ್ಡಮನಿ, ಕರ್ನಾಟಕ ರಾಜ್ಯ ಮೀನುಗಾರಿಕೆ ಸಹಕಾರಿ ಮಹಾಮಂಡಳಿಯ ಜನರಲ್ ಮ್ಯಾನೇಜರ್ ಪಿ.ಎಂ. ಮುದ್ದಣ್ಣ, ಮೀನುಗಾರಿಕಾ ಉಪನಿರ್ದೇಶಕ ಪಾಶ್ವನಾಥ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು