ಇತ್ತೀಚಿನ ಸುದ್ದಿ
ಗಾನ ಗಾರುಡಿ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅಂತ್ಯ ಕ್ರಿಯೆ ಎಲ್ಲಿ? ಯಾವಾಗ? ಇಲ್ಲಿದೆ ಪೂರ್ಣ ಮಾಹಿತಿ
September 26, 2020, 9:25 AM

ಚೆನ್ನೈ(reporterkarnataka news): ಶುಕ್ರವಾರ ನಿಧನರಾದ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಇಂದು ಪೂರ್ಣ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
ರೆಡ್ ಹಿಲ್ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಕೊರೊನಾ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಆಂಧ್ರಪ್ರದೇಶ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಪ್ರತಿನಿಧಿಗಳು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.