1:12 PM Friday4 - December 2020
ಬ್ರೇಕಿಂಗ್ ನ್ಯೂಸ್
ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ…

ಇತ್ತೀಚಿನ ಸುದ್ದಿ

ಗಾಂಧಿ ತತ್ವ- ಸಿದ್ದಾಂತ ಯುವ ಜನತೆಗೆ ಮಾದರಿಯಾಗಲಿ

October 3, 2020, 2:18 PM

ಮಂಗಳೂರು (Reporter Karnataka News)

ಭಾರತ ಸರಕಾರ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಮಂಗಳೂರು, ಯುವಕ, ಯುವತಿ ಮತ್ತು ಮಹಿಳಾ ಮಂಡಲ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ವಿಶ್ವವಿದ್ಯಾಲಯ ಕಾಲೇಜು ಮಂಗಳೂರು ಸಹಯೋಗದೊಂದಿಗೆ ೧೫೧ನೇ  ಗಾಂಧಿ ಜಯಂತಿ ಕಾರ್ಯಕ್ರಮ ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶುಕ್ರವಾರ ಜರಗಿತು.

ಜಿಲ್ಲಾ ಯುವ ಸಮನ್ವಯಾಧಿಕಾರಿ ರಘುವೀರ್ ಸೂಟರ್‌ಪೇಟೆ ಪ್ರಾಸ್ತಾವಿಕವಾಗಿ ಮಾತನಾಡಿ, ಗಾಂಧೀಜಿಯ ತತ್ವ ಸಿದ್ದಾಂತ ಮತ್ತು ಪರಿಕಲ್ಪನೆ ಯುವ ಜನರಿಗೆ ಮಾದರಿಯಾಗಬೇಕು ಎಂದು ತಿಳಿಸಿದರು. ಮುಂದಿನ ೧ ವರ್ಷದವರೆಗೆ  ಸ್ವಚ್ಚತಾ ಅಭಿಯಾನ, ಫಿಟ್ ಇಂಡಿಯಾ ಯೂತ್ ಕ್ಲಬ್ ಹಾಗೂ ಇತರ ಫಿಟ್ನೆಸ್ ಕಾರ್ಯಕ್ರಮಗಳು ಮತ್ತು (ಓ.ಇ.ಪಿ ) ರಾಷ್ಟ್ರೀಯ ಶಿಕ್ಷಣ   ನೀತಿ ೨೦೨೦ ವಿಚಾರವಾಗಿ ತಳಮಟ್ಟದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಯುವ ಜನರನ್ನು ತಲುಪುವ ಬಗ್ಗೆ ಕಾರ್ಯಯೋಜನೆಯನ್ನು ಮಾಡಲಾಗಿದೆಯೆಂದು ವಿವರಿಸಿದರು.


ಮೇಯರ್ ದಿವಾಕರ್ ಪಾಂಡೇಶ್ವರ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಗಾಂಧೀಜಿಯವರ ಆಶಯದಂತೆ  ಗ್ರಾಮ ಸ್ವರಾಜ್ ವ್ಯವಸ್ಥೆಯ ಮಟ್ಟದಲ್ಲಿ ಗ್ರಾಮಗಳ ಸರ್ವಾಂಗೀಣ ಅಭಿವೃದ್ದಿಯ ನಿಟ್ಟಿನಲ್ಲಿ ಯುವಕ ಮಂಡಲಗಳು ಹೆಚ್ಚಿನ ಪಾತ್ರ ವಹಿಸುವಂತೆ ಕರೆಕೊಟ್ಟರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಪ್ರಿನ್ಸಿಪಾಲ್  ಉದಯ ಕುಮಾರ್ ಎಂ.ಎ. ಅವರು ಮಾತನಾಡಿ, ಗಾಂಧೀಜಿಯ ತತ್ವ ಸಿದ್ದಾಂತಗಳನ್ನು ಯುವ ಜನತೆ ಮೈಗೂಡಿಸಿಕೊಳ್ಳುವ ಮೂಲಕ ಆದರ್ಶ ಸಮಾಜ ನಿರ್ಮಾಣಕ್ಕೆ ಕಾಣಿಕೆ ನೀಡಲು ಸಾಧ್ಯ ಎಂದು ತಿಳಿಸಿದರು.
ಸಾಮಾಜಿಕ ಹೋರಾಟಗಾರರು, ವಕೀಲರಾದ  ದಿನಕರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮ ಅಭಿವೃದ್ದಿ ಹಾಗೂ ಸ್ವದೇಶಿ ಉತ್ಪನ್ನಗಳ ಬಳಕೆ ಪರಿಕಲ್ಪನೆಯನ್ನು ಯುವ ಮಂಡಳಿಗಳು ಜನ ಸಾಮಾನ್ಯರಿಗೆ ತಲುಪಿಸುವ ಮೂಲಕ ಜಾಗೃತಿಗೊಳಿಸಿ ದೇಶದ ಅಭಿವೃಧಿಯಲ್ಲಿ ಪಾತ್ರ ವಹಿಸಬೇಕಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮನಪಾ ನೂತನ ಮಹಾಪೌರರಾದ ಹಾಗೂ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿಯಾದ ದಿವಾಕರ ಪಾಂಡೇಶ್ವರರವರಿಗೆ ವಿಶ್ವವಿದ್ಯಾಲಯ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರಿಂದ ಸನ್ಮಾನ ಮಾಡಲಾಯಿತು. ನೆಹರು ಯುವ ಕೇಂದ್ರದ ತಾಲೂಕು ಪ್ರತಿನಿಧಿಗಳಾದ ವಿಕಾಸ್ ಕುಂಪಲ, ಸುಶ್ಮಿತಾ ಮೂಡಬಿದ್ರಿ, ತೀಕ್ಷಿತ್ ಬೆಳ್ತಂಗಡಿ, ಪ್ರೀತೇಶ್ ಹಾಗೂ ಯುವ ನಾಯಕರುಗಳಾದ ರಚನಾ ಶೆಟ್ಟಿ, ಸುರಕ್ಷ, ರಕ್ಷಾ ಇವರು ಉಪಸ್ಥಿತರಿದ್ದರು. ದೇವಿಪ್ರಸಾದ್ ಶೆಟ್ಟಿ ನಿರೂಪಿಸಿದರು. ಪ್ರೀತೇಶ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು