ಇತ್ತೀಚಿನ ಸುದ್ದಿ
Big News : ಗಣೇಶೋತ್ಸವಕ್ಕೆ ಸರಕಾರ ಅಸ್ತು : ಇಲ್ಲಿದೆ ಹೊಸ ಮಾರ್ಗಸೂಚಿಯ ಮೇನ್ ಪಾಯಿಂಟ್ಸ್
August 18, 2020, 7:47 AM

ಬೆಂಗಳೂರು (Reporter Karnataka News)
ಶ್ರೀ ಗಣೇಶೋತ್ಸವ ಆಚರಿಸುವ ಸಂಬಂಧ ಪರಿಷ್ಕೃತ ಮಾರ್ಗಸೂಚಿಗಳನ್ನು ಟ್ವಿಟರಲ್ಲಿ ಮುಖ್ಯಮಂತ್ರಿಗಳು ಹಂಚಿಕೊಂಡಿದ್ದು ಅದು ಹೀಗಿದೆ.
- ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದಲ್ಲಿ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ಖಾಸಗಿ/ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯೊಂದಿಗೆ ಆಚರಿಸಬಹುದು.
2.ನಾಲ್ಕು ಅಡಿ ಎತ್ತರದ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸುವುದು.
3.ಪಾರಂಪರಿಕ ಗಣೇಶೋತ್ಸವಕ್ಕೆ, ಗಣೇಶೋತ್ಸವ ಸಮಿತಿಗಳ / ಮಂಡಳಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನ್ಸಿಪಲ್ ಕಾರ್ಪೊರೇಷನ್/ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿ ಯನ್ನು ಪಡೆಯತಕ್ಕದ್ದು. ಇಂದು ವಾರ್ಡಿಗೆ / ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರೋತ್ಸಾಹಿಸುವುದು.
4.ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಮ್ಮೆಲೆ 20 ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾಧಿಗಳಿಗೆ ಅನುವು ಮಾಡುವುದು.
5.ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ/ಸಂಗೀತ ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.
- ಶ್ರೀ ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆ ಹೊರಡಿಸಿ ತಕ್ಕದ್ದಲ್ಲ! ಮಾಡತಕ್ಕದ್ದಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ
- ವಿಸರ್ಜಿಸುವುದು ಮತ್ತು ಸರ್ಕಾರಿ/ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಅತೀ ಸಮೀಪ ವಾಗುವಂತಹ ಮಾರ್ಗ ಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ / ಜಿಲ್ಲಾಡಳಿತ / ಹತ್ತಿರದ ಸ್ಥಳೀಯ ಸಂಸ್ಥೆಗಳ | ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೋಂಡ ಅಥವಾ ಮೊಬೈಲ್ ಟ್ಯಾಂಕ್ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ವಿಸರ್ಜಿಸುವುದು.