ಇತ್ತೀಚಿನ ಸುದ್ದಿ
ಬೃಹತ್ ಗಾಂಜಾ ಸಾಗಾಟ ಜಾಲ ಪತ್ತೆ: 3 ಮಂದಿ ಬಂಧನ, 24.50 ಲಕ್ಷ ಮೌಲ್ಯದ ಸೊತ್ತು ವಶ
August 11, 2020, 3:13 PM

ಪುತ್ತೂರು(reporterkarnataka news):
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮಂಗಳವಾರ ಬಂಟ್ವಾಳದ ಕದಿಲ ಸಮೀಪ ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲವನ್ನು ಪತ್ತೆ ಹಚ್ಚಿದ್ದು, ಈ ಸಂಬಂಧ ಮೂವರನ್ನು ಬಂಧಿಸಿ 24.50 ಲಕ್ಷ ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ.
ಮಂಗಳವಾರ ಮುಂಜಾನೆ ಸುಮಾರು 6.30ರ ವೇಳೆಗೆ ಪುತ್ತೂರು ನಗರ ಠಾಣೆ ಪೊಲೀಸ್ ನಿರೀಕ್ಷಕರು ತಮ್ಮ ಠಾಣೆ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಪಾಟ್ರಕೋಡಿ ಎಂಬಲ್ಲಿ ಪಿಕ್ ಆಪ್ ವಾಹನ ಮತ್ತು ಕಾರೊಂದರಲ್ಲಿ ಅಕ್ರಮವಾಗಿ ಅಪಾರ ಪ್ರಮಾಣದ ಗಾಂಜಾ ಸಾಗಾಟ ಮಾಡುತ್ತಿದ್ದಾಗ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಸುಮಾರು 17.50 ಲಕ್ಷ ಮೌಲ್ಯದ 175 ಕೆಜಿ ಗಾಂಜಾ, ಸುಮಾರು 3 ಲಕ್ಷ ಮೌಲ್ಯದ ಪಿಕ್ ಅಪ್ ವಾಹನ, ಸುಮಾರು 4 ಲಕ್ಷ ರೂ. ಮೌಲ್ಯದ ಕಾರು ಸೇರಿದಂತೆ ಒಟ್ಟು 24.50 ಲಕ್ಷ ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಮಂಜೇಶ್ವರದ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು (26 ), ಮಂಜೇಶ್ವರ ಹೊಸಂಗಡಿಯ ಮೊಹಮ್ಮದ್ ಶಫಿಕ್ ( 31), ಕನ್ಯಾನದ ಮಡಕುಂಜ ಖಲಂದರ್ ಶಾಫಿ(26 ) ಎಂಬವರುಗಳನ್ನು ಬಂಧಿಸಲಾಗಿದೆ.

ಆರೋಪಿಗಳ ಪೈಕಿ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು ಎಂಬಾತನ ವಿರುದ್ದ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 7 ಪ್ರಕರಣ, ಕುಂಬಳೆ ಠಾಣೆಯಲ್ಲಿ 2 ಪ್ರಕರಣ ಹಾಗೂ ಖಲಂದರ್ ಶಾಫಿ ಎಂಬಾತನ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ 2 ಅಕ್ರಮ ಗಾಂಜಾ ಪ್ರಕರಣ ಹಾಗೂ 1 ಕೊಲೆ ಯತ್ನ ಪ್ರಕರಣ ಮತ್ತು ಕಾವೂರು ಠಾಣೆಯಲ್ಲಿ 1 ಅಕ್ರಮ ಗಾಂಜಾ ಸಾಗಾಟ ಪ್ರಕರಣ ದಾಖಲಾಗಿದೆ.