7:31 PM Monday18 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ…

ಇತ್ತೀಚಿನ ಸುದ್ದಿ

ಗಾಯಾಳುಗಳ ಆಸ್ಪತ್ರೆಗೆ ಸ್ಥಳಾಂತರಿಸಿ, 10 ಸಾವಿರ ನಗದು ನೀಡಿ ಉಪಚರಿಸಿದ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ

January 8, 2021, 3:31 PM

ಭೀಮಣ್ಣ ಪೂಜಾರ್ ವಿಜಯಪುರ

info.reporterkarnataka@gmail.com

ಹಿರೇಬಾಗೆವಾಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅವರು ಬೆಳಗಾವಿ ಆಸ್ಪತ್ರೆಗೆ ಸ್ಥಳಾಂತರಿಸಿ ಸಕಾಲದಲ್ಲಿ ಚಿಕಿತ್ಸೆಗೆ ನೆರವಾಗಿರುವುದು ಮತ್ತು 10 ಸಾವಿರ ನಗದು ನೀಡಿರುವುದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಹಿರೇಬಾಗೆವಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬೆಳಗ್ಗೆ 10.30ಕ್ಕೆ ರಸ್ತೆ ಅಪಘಾವೊಂದು ಸಂಭವಿಸಿತ್ತು. ಅದೇ ದಾರಿಯಾಗಿ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅವರು ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಗಾಯಾಳುಗಳು ಒದ್ದಾಡುತ್ತಿರುವುದನ್ನು ಕಂಡ ಅವರು ತಕ್ಷಣ ಸ್ಪಂದಿಸಿ ಗಾಯಾಳುಗಳನ್ನು ಬೆಳಗಾವಿಗೆ ಸ್ಥಳಾಂತರಿಸಲು ನೆರವಾದರು. ಅಲ್ಲದೆ ಚಿಕಿತ್ಸೆಗಾಗಿ ಸ್ಥಳದಲ್ಲೇ 10 ಸಾವಿರ ನಗದು ನೀಡಿ ಮಾನವೀಯತೆ ಮೆರೆದರು.

ಪ್ರಕಾಶ್ ಹುಕ್ಕೇರಿ ಅವರ ಜನಸ್ಪಂದನೆ ನಾಗರಿಕರಲ್ಲಿ ತುಂಬಾ ಖುಷಿ ಉಂಟು ಮಾಡಿದೆ. ಮತ್ತೊಮ್ಮೆ ಅವರು ಜನಮನ ಗೆದ್ದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು