10:22 PM Friday4 - December 2020
ಬ್ರೇಕಿಂಗ್ ನ್ಯೂಸ್
ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಗಾಂಧಿ ಕುಟುಂಬವೇ ಸೂಕ್ತ: ಕೇಂದ್ರ ಮಾಜಿ ಸಚಿವ ಪೂಜಾರಿ

August 24, 2020, 6:16 PM

ಮಂಗಳೂರು(reporterkarnataka news):

ಪ್ರಸಕ್ತ ಕ್ಲಿಷ್ಟಕರ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ಗಾಂಧಿ ಕುಟುಂಬವೇ ಸೂಕ್ತ ಎಂದು ಕೇಂದ್ರ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುತ್ಸದ್ದಿ ಬಿ. ಜನಾರ್ದನ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ. 

ಈ ಹಿಂದೆಯೂ ಅನೇಕ ಬಾರಿ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಯಾವುದೇ ರೀತಿಯಲ್ಲಿ ಧೃತಿಗೆಡದೇ ಗಾಂಧಿ ಕುಟುಂಬದ ಸದಸ್ಯರೇ ಪಕ್ಷವನ್ನು ಮುನ್ನೆಡೆಸಿದ್ದರು. ಗಾಂಧಿ ಕುಟುಂಬದ ಹಿರಿಯರು ದೇಶಕ್ಕಾಗಿ ಅಪಾರವಾದ ತ್ಯಾಗ, ಬಲಿದಾನ ಮಾಡಿದ್ದಾರೆ. ಅವರು ತಮ್ಮ ಸರ್ವಸ್ವವನ್ನು ದೇಶಕ್ಕಾಗಿ ಅರ್ಪಣೆ ಮಾಡಿದ್ದು ಇತಿಹಾಸ ಎಂದು ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿರುವ ಪೂಜಾರಿ ಹೇಳಿದ್ದಾರೆ.

ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ಕಟ್ಟುವಲ್ಲಿಯೂ ಗಾಂಧಿ ಕುಟುಂಬದ ಪಾತ್ರ ಅಪಾರವಾಗಿದೆ. ಆದ್ದರಿಂದ ಎಐಸಿಸಿ ಹೊಣೆಗಾರಿಕೆಯನ್ನು ಗಾಂಧಿ ಕುಟುಂಬದವರೇ ವಹಿಸಿಕೊಳ್ಳುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು