1:30 PM Saturday6 - March 2021
ಬ್ರೇಕಿಂಗ್ ನ್ಯೂಸ್
ತಮಿಳುನಾಡು ವಿಧಾನಸಭೆ ಚುನಾವಣೆ: 243 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ಧೆ?… ಅಸ್ಸಾಂ: 126 ಸ್ಥಾನಗಳಲ್ಲಿ ಬಿಜೆಪಿ 92ರಲ್ಲಿ ಸ್ಪರ್ಧೆ?: ಮಿಕ್ಕ ಸೀಟುಗಳು ಮಿತ್ರ ಪಕ್ಷಕ್ಕೆ? ಹೊರ ದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೂಡುಗೆರೆಯ ಕುಮಾರ್: ನೆರವಿಗೆ ಬಂದ ಕೆಸಿಎಫ್ ಸೌದಿ… ಕೇರಳ ಬಿಜೆಪಿ ಸಿಎಂ ಕ್ಯಾಂಡಿಡೇಟ್: ಬಿಜೆಪಿ ಹೈಕಮಾಂಡ್ ಇನ್ನೂ ಘೋಷಣೆ ಮಾಡಿಲ್ವಂತೆ! ಸೆಕ್ಸ್ ಸಿಡಿ ಬಳಿಕ ಸಂಕಟದಲ್ಲಿ ಸಾಲು ಸಾಲು ಸಚಿವರು: ಮಾನಹಾನಿ ವರದಿ ತಡೆಯುವಂತೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಡಾ. ಎಂ. ಮೋಹನ್ ಆಳ್ವರಿಗೆ ಕವಿ, ಸಜ್ಜನ ರಾಜಕಾರಣಿ ಬಿ.ಎಂ.ಇದಿನಬ್ಬ ಗೌರವ ಪ್ರಶಸ್ತಿ ಪ್ರದಾನ  ಶ್ಲಾಘ್ಯದಲ್ಲಿ 10ನೇ ತರಗತಿ ಸಿಬಿಎಸ್ ಇ ಗಣಿತ, ವಿಜ್ಞಾನ ಟ್ಯೂಶನ್ ತರಗತಿಗೆ ಪ್ರವೇಶ… ಮಂಗಳೂರಿನಲ್ಲಿ ಹಸುಗೂಸುಗಳ ಬೃಹತ್ ಮಾರಾಟ ಜಾಲ ಪತ್ತೆ: ಗಂಡು ಮಗುವಿಗೆ 6 ಲಕ್ಷ,… ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪಾಲಿಕೆಗೆ ದೂರು ರವಾನೆಗೆ ಬರೋಬ್ಬರಿ 8…

ಇತ್ತೀಚಿನ ಸುದ್ದಿ

ಗೊಂದಲ ಹುಟ್ಟಿಸುವ ಬಿಜೆಪಿ ಸರಕಾರ ಜನಹಿತವನ್ನು ಬಯಸುತ್ತಿಲ್ಲ : ಖಾದರ್ ಆರೋಪ

October 17, 2020, 3:51 PM

ಮಂಗಳೂರು (reporter Karnatakanews)

ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಗೊಂದಲದಲ್ಲಿದ್ದಾರೆ. ಅಲ್ಲದೇ ಜನರ ಹಿತ ಬಯಸದ ಸರ್ಕಾರ ಜನರ ಹಿತವನ್ನು ಮರೆತು ಆಡಳಿತ ಮಾಡುತ್ತಿದೆ ಎಂದು ಶಾಸಕ ಯು.ಟಿ ಖಾದರ್ ಬಿಜೆಪಿ ಸರಕಾರವನ್ನು ಆರೋಪಿಸಿದರು.

ಅವರು ಶನಿವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅನುದಾನ ರಹಿತ ಶಾಲೆಗಳ ಶಿಕ್ಷಕರು ಸಂಕಷ್ಟದಲ್ಲಿದ್ದಾರೆ, ವಿದ್ಯಾರ್ಥಿಗಳಿಗೆ ಪರೀಕ್ಷೆ ಇದೆಯೇ, ಇಲ್ಲವೋ ಎಂಬ ಗೊಂದಲವೂ ಇದೆ ಎಂದರು.


ಜನರಿಗೆ ಸುಸಜ್ಜಿತ ವ್ಯವಸ್ಥೆಯ‌ನ್ನು ಮಾಡುವುದು ಸರ್ಕಾರದ ಕೆಲಸ ಆದರೆ ಅದನ್ನು ಮರೆತು ಆಡಳಿತ ಮಾಡುತ್ತಿದೆ. ಪ್ರತ್ಯೇಕ ಮರಳು ನೀತಿ ಮಾಡೋ ಮೂಲಕ ಏನು ಸಾಧಿಸಲು ಹೊರಟಿದ್ದಾರೆ ಎಂದು ತಿಳಿಯುತ್ತಿಲ್ಲ.
ಮರಳಿಗೆ ಅಧಿಕೃತ ಅನುಮತಿ ಕೊಡದೇ ಅನಧಿಕೃತ ಚಟುವಟಿಕೆ ಹೆಚ್ಚಾಗಿದೆ ಎಂದರು.


ಜನರ ಸಮಸ್ಯೆಗೆ ಆದಷ್ಟು ಬೇಗ ಪರಿಹಾರ ಕಲ್ಪಿಸಬೇಕು, ಜನರ ಕಷ್ಟವನ್ನು ಆಲಿಸಲು ಸರ್ಕಾರಕ್ಕೆ ಸಮಯವೂ ಇರದ ಸರಕಾರ ಅಭಿವೃದ್ಧಿ ಕಾರ್ಯ ಮಾಡುವುದಾದರು ಹೇಗೆ., ಭಾವನಾತ್ಮಕ ವಿಚಾರಗಳಿಂದ ಜನರ ಹೊಟ್ಟೆ ತುಂಬಲ್ಲ ಹತ್ತು‌‌ ಮಂದಿ ಶ್ರೀಮಂತರ ಕೈಯಲ್ಲಿ ಹಣ ಇದ್ರೆ ಆರ್ಥಿಕ ಅಭಿವೃದ್ಧಿ ‌ಆಗಲ್ಲ ಎಂದು ಕಿಡಿ ಕಾರಿದ ಖಾದರ್ ಈ ವರ್ಷವನ್ನು ಝೀರೋ ಇಯರ್ ಮಾಡಿ ಎನ್ನುವ ಸಲಹೆಯನ್ನೂ ನೀಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು