7:15 PM Saturday23 - January 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಬೆಳಗಾವಿ ಲೋಕಸಭೆ ಉಪ ಚುನಾವಣೆ: ಬಿಜೆಪಿ ಟಿಕೆಟ್ ಗೆ ಪ್ರಮೋದ್ ಮುತಾಲಿಕ್ ಹಕ್ಕೊತ್ತಾಯ ಮಹಿಳಾ ಪೊಲೀಸ್ ಮೇಲೆ ಹಲ್ಲೆ ಆರೋಪ: ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ… ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು

ಇತ್ತೀಚಿನ ಸುದ್ದಿ

ಗೌನಿಪಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರ ಸಂಘದ ಅಧ್ಯಕ್ಷರ ಶಂಕರ್‌ ಪ್ರಸಾದ್‌, ಉಪಾಧ್ಯಕ್ಷೆ ನಾಸಿರಾ 

November 25, 2020, 9:53 PM


ಶ್ರೀನಿವಾಸಪುರ(reporterkarnataka news)
: ಇಲ್ಲಿನ ಗೌನಿಪಲ್ಲಿ ಗ್ರಾಮದ ದೊಡ್ಡ ಪ್ರಮಾಣದ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಶಂಕರ್‌ ಪ್ರಸಾದ್‌, ಉಪಾಧ್ಯಕ್ಷೆಯಾಗಿ ನಾಸಿರಾ ವೈ.ರಿಯಾಜ್‌ ಪಾಷ ಬುಧವಾರ ಅವಿರೋಧ ಆಯ್ಕೆಯಾದರು.

 ಆಯ್ಕೆ ಬಳಿಕ ಸಂಘದ ಅಧ್ಯಕ್ಷ ಶಂಕರ್‌ ಪ್ರಸಾದ್‌ ಮಾತನಾಡಿ, ‘ಸಹಕಾರ ಸಂಘ, ಹಾಗೂ ಫಲಾನುಭವಿಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಬಡ್ಡಿರಹಿತ ಸಾಲ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗುತ್ತೇನೆ. ಸಹಕಾರ ಸಂಘದ ವ್ಯಾಪ್ತಿಗೆ ಬರುವ ಎಲ್ಲ ಗ್ರಾಮಗಳ ಫಲಾನುಭವಿಗಳಿಗೆ ಆರ್ಥಿಕ ಚೈತನ್ಯ ನೀಡಲು ಪ್ರಯತ್ನಿಸುತ್ತೇನೆ’ ಎಂದು ಹೇಳಿದರು.

 ಈ ಸಂದರ್ಭದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಗ್ರಾಮದ ಮುಖ್ಯ ರಸ್ತೆಗಳಲ್ಲಿ ವಿಜಯೋತ್ಸವ ನಡೆಸಿ ಸಂಭ್ರಮಿಸಿದರು. ಮುಖಂಡರಾದ ವೈ.ಎಂ.ಅಮೀರ್‌ ಖಾನ್‌, ಎಂ.ರಾಮಕೃಷ್ಣೇಗೌಡ, ಜಿ.ವಿ.ರಘುನಾಥರಾವ್‌, ಕೆ.ಟಿ.ಅಪ್ಪಿರೆಡ್ಡಿ, ಜಾಮಕಾಯಿಲು ವೆಂಕಟೇಶ್‌, ಪಿ.ಟಿ.ಶಂಕರ್‌, ಚಂದ್ರಮೌಳಿ, ಎಂ.ಆರ್‌.ಆನಂದ್‌, ಟಿ.ಜಿ.ರಮೇಶ್‌, ಷಬ್ಬೀರ್‌ ಖಾನ್, ಅಜ್‌ಮಲ್‌ ಕಾನ್‌, ರಿಯಾಜ್‌ ಖಾನ್‌, ಫಿರೋಜ್‌ ಖಾನ್‌, ಸಿ.ವಿ.ವೆಂಕಟರವಣ, ವಿಶ್ವನಾಥ್‌, ಮಧು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು