6:36 PM Monday18 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ…

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ ಚುನಾವಣೆ: ಮತದಾನ ಕೇಂದ್ರದ 200 ಮೀಟರ್ ಸುತ್ತ ನಿಷೇಧಾಜ್ಞೆ ಜಾರಿ

December 21, 2020, 8:58 PM

ಮಂಗಳೂರು(reporterkarnataka):  ಗ್ರಾಮ ಪಂಚಾಯತ್‍ಗಳ ಸಾರ್ವತ್ರಿಕ ಚುನಾವಣೆ-2020ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಡಿಸೆಂಬರ್ 22 ರಂದು ಮೊದಲ ಹಂತದ ಚುನಾವಣೆ ಬಂಟ್ವಾಳ ತಾಲೂಕಿನಲ್ಲಿ ನಡೆಯಲಿರುವುದರಿಂದ, ಅಂದು  ಸಂಜೆ 5 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಎರಡನೇ ಹಂತದ ಚುನಾವಣೆ ಡಿಸೆಂಬರ್ 27 ರಂದು ಬೆಳ್ತಂಗಡಿ, ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ ನಡೆಯಲಿರುವುದರಿಂದ, ಡಿಸೆಂಬರ್ 25 ರಂದು ಸಂಜೆ 5 ಗಂಟೆಯಿಂದ 27 ರಂದು ಸಂಜೆ 5 ಗಂಟೆಯವರೆಗೆ ಮತದಾನ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ಪ್ರದತ್ತವಾದ ಅಧಿಕಾರದಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೆಶಿಸಿದ್ದಾರೆ.

       ಮತದಾನದ ದಿನದಂದು ಮತದಾನ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಮತದಾನ ಕಾರ್ಯಕ್ಕೆ ಬರುವ ಮತದಾರರನ್ನು ಹೊರತುಪಡಿಸಿ ಇತರ ವ್ಯಕ್ತಿಗಳು ಸಕಾರಣವಿಲ್ಲದೇ 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದನ್ನು , ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೇಷ್ಠೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಹಾಗೂ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಪತ್ರಗಳನ್ನು ಅಂಟಿಸುವುದರಿಂದ, ಅಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವರೇ ಪ್ರೆರೇಪಿಸುವ ಕ್ರಮವನ್ನು ನಿಷೇಧಿಸಲಾಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು