8:01 AM Sunday17 - January 2021
ಬ್ರೇಕಿಂಗ್ ನ್ಯೂಸ್
ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ ನೂತನ ಸಚಿವ ಎಸ್. ಅಂಗಾರರಿಗೆ ಸಿಹಿ ತಿನ್ನಿಸಿ ಶುಭ ಹಾರೈಸಿದ ಬಿಜೆಪಿ ಭೀಷ್ಮ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ ಚುನಾವಣೆ: ಮತಪೆಟ್ಟಿಗೆ ಜತೆ ಮತಗಟ್ಟೆಗೆ ತೆರಳಿದ ಸಿಬ್ಬಂದಿಗಳು

December 21, 2020, 8:34 PM

ಶ್ರೀನಿವಾಸಪುರ(reporterkarnataka news): ಪಟ್ಟಣದ ಸರ್ಕಾರಿ ಬಾಲಕಿಯರ ಕಾಲೇಜು ಮೈದಾನದಲ್ಲಿ ಸ್ಥಾಪಿಸಲಾಗಿರುವ ಚುನಾವಣಾ ಸಾಮಗ್ರಿ ವಿತರಣಾ ಕೇಂದ್ರದಲ್ಲಿ ಸೋಮವಾರ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ನೇಮಿಸಲಾಗಿರುವ ಮತಗಟ್ಟೆ ಸಿಬ್ಬಂದಿ, ಚುನಾವಣಾ ಸಾಮಗ್ರಿ ಪಡೆದುಕೊಂಡರು.

  ಪಡೆದುಕೊಂಡ ಚುನಾವಣಾ ಸಾಮಗ್ರಿಗಳನ್ನು ಪ್ರತ್ಯೇಕವಾಗಿ ಕುಳಿತು ಪರಿಶೀಲನೆ ನಡೆಸಿದ ಬಳಿಕ, ಕಾಲೇಜು ಆವರಣದಲ್ಲಿ ನಿರ್ಮಿಸಲಾಗಿದ್ದ ಭೋಜನ ಶಾಲೆಯಲ್ಲಿ ಊಟ ಮುಗಿಸಿಕೊಂಡು, ತಮಗಾಗಿ ಮೀಸಲಿಡಲಾಗಿದ್ದ ಬಸ್‌ಗಳಲ್ಲಿ ನಿಗದಿತ ಗ್ರಾಮಗಳ ಮತಗಟ್ಟೆಗಳಿಗೆ ತೆರಳಿದರು.

    ತಾಲ್ಲೂಕಿಲ್ಲಿ ಚುನಾವಣೆ ನಡೆಯಲಿರುವ 23 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 253 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಆ ಮತಗಟ್ಟೆಗಳಲ್ಲಿ ಚುನಾವಣಾ ಕಾರ್ಯ ನಿರ್ವಹಿಸಲು1265 ಸಿಬ್ಬಂದಿಯನ್ನು ನೇಮಿಸಲಾಗಿದೆ. ಮತಗಟ್ಟೆಗಳ ರಕ್ಷಣೆ ಹಾಗೂ ಸುವ್ಯವಸ್ಥೆ ಪಾಲನೆಗೆ 350 ಪೊಲೀಸ್‌ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗಿದೆ.

  ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅವರ ಮಾರ್ಗದರ್ಶನದಲ್ಲಿ ಕಂದಾಯ ಹೋಬಳಿವಾರು ಕಂದಾಯ ನಿರೀಕ್ಷಕರು, ಶಿರಸ್ತೇದಾರರು, ರಿಟರ್ನಿಂಗ್‌ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಚುನಾವಣಾ ವಿಭಾಗದ ಸಿಬ್ಬಂದಿ ಚುನಾವಣಾ ಸಾಮಗ್ರಿ ವಿತರಣಾ ಕಾರ್ಯದಲ್ಲಿ ನೆರವಾದರು. ಮತಗಟ್ಟೆ ಸಿಬ್ಬಂದಿಗೆ ಏರ್ಪಡಿಸಲಾಗಿದ್ದ ಊಟದ ವ್ಯವಸ್ಥೆ ಮೆಚ್ಚುಗೆಗೆ ಪಾತ್ರವಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು