9:34 AM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಠೇವಣಿ  ಇಡಲು ಜಿಲ್ಲಾಧಿಕಾರಿ ಆದೇಶ 

December 3, 2020, 8:50 AM

ಮಂಗಳೂರು (reporterkarnataka): ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ರಾಜ್ಯದ 30 ಜಿಲ್ಲೆಗಳಲ್ಲಿ ಒಟ್ಟು 5762 ಗ್ರಾಮ ಪಂಚಾಯತ್‍ಗಳಿಗೆ 2 ಹಂತದಲ್ಲಿ ಚುನಾವಣೆ ನಡೆಸಲಿದ್ದು, ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳೆ ರಕ್ಷಣೆಗೆ ಮತ್ತು ಆತ್ಮ ರಕ್ಷಣೆಗೆ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರ್ತ್ರಗಳನ್ನು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯಡಿ ನಮೂನೆ ನಂಬ್ರ 8 ರ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿಗಳಲ್ಲಿ ಅಥವಾ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ನೀಡಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಹಾಗೂ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಬಂಟ್ವಾಳ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರವಾನಿಗೆದಾರರು ಡಿಸೆಂಬರ್ 14 ರಿಂದ 21 ರೊಳಗೆ ಶಸ್ತ್ರಾಸ್ತ್ರಾ ಠೇವಣಿಯನ್ನು ಇಡಬೇಕು. 
ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದಂತೆ ಬೆಳ್ತಂಗಡಿ, ಸುಳ್ಯ ಪುತ್ತೂರು ಮತ್ತು ಕಡಬ ತಾಲೂಕಿಗೆ ಸಂಬಂಧಪಟ್ಟ ಎಲ್ಲಾ ಪರವಾನಿಗೆದಾರರು ಡಿಸೆಂಬರ್ 19 ರಿಂದ ಡಿಸೆಂಬರ್ 26 ರೊಳಗೆ ಶಸ್ತ್ರಾಸ್ತ್ರಾ ಠೇವಣಿಯನ್ನು ಇಡಬೇಕು.
       ಚುನಾವಣಾ  ಫಲಿತಾಂಶ ಘೋಷಣೆಯಾದ  ದಿನಾಂಕದಿಂದ ಒಂದು ವಾರದ  ನಂತರ (6-1-2021) ರಿಂದ ಠೇವಣಿ ಇಡಲಾದ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆ / ಅಧೀಕೃತ ಕೋವಿ ಮತ್ತು ಮದ್ದುಗುಂಡು ಡೀಲರ್‍ಗಳಿಂದ ಪರವಾನಿಗೆದಾರರು ಶಸ್ತ್ರಾಸ್ತ್ರಗಳನ್ನು ಮರು ಪಡೆದುಕೊಳ್ಳಬೇಕು. ಪರವಾನಿಗೆದಾರರಿಗೆ  ಬೆಳೆರಕ್ಷಣೆಗಾಗಿ ಶಸ್ತ್ರಾಸ್ತ್ರದ ತೀರಾ ಅವಶ್ಯಕತೆ ಇದ್ದರೆ ಮಾತ್ರ ಸಂಬಂಧಪಟ್ಟವರು ಪೂರಕ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲೂಕು ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಬೇಕು. ಹಾಗೂ ಆತ್ಮ ರಕ್ಷಣೆಗಾಗಿ ಆಯುಧದ ತೀರಾ ಅವಶ್ಯಕತೆ ಇದ್ದರೆ ಸಂಬಂಧಪಟ್ಟವರು ಪೂರಕ ದಾಖಲೆಗಳೊಂದಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಹವಾಲುಗಳನ್ನು ಸಲ್ಲಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಪ್ರಕಟಣೆ ತಿಳಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು