11:09 PM Thursday21 - January 2021
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ… ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬಿಡನ್ ಪ್ರಮಾಣ ವಚನ ಸ್ವೀಕಾರ: ಕಣ್ಣೀರು ಸುರಿಸಿದ… ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4…

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ ಚುನಾವಣೆ ಇಂದು ಮತ ಎಣಿಕೆ: 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

December 30, 2020, 8:40 AM

ಮಂಗಳೂರು (reporterkarnataka news): ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ-2020 ರ ಸಂಬಂಧ ಎಲ್ಲಾ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 29 ರಂದು ಮಧ್ಯರಾತ್ರಿ 12 ಗಂಟೆಯಿಂದ ಡಿಸೆಂಬರ್ 30 ರ ಮಧ್ಯರಾತ್ರಿ 12 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಂತೆ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. 
ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ  ಯಾವುದೇ ಮೆರವಣಿಗೆ, ವಿಜಯೋತ್ಸವ, ಬಹಿರಂಗ ಸಭೆ-ಸಮಾರಂಭಗಳನ್ನು ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಾಸ್ತಾ-ರೋಖ ಹಾಗೂ ಮುತ್ತಿಗೆ ನಡೆಸುವುದನ್ನು ನಿಷೇಧಿಸಲಾಗಿದೆ. 
ಶಸ್ತ್ರಗಳು, ದೊಣ್ಣೆ, ಕತ್ತಿ, ಈಟಿ, ಗದೆ, ಬಂದೂಕು, ಚಾಕು, ಕೋಲು, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಯಾವುದೇ ಸಂರಕ್ಷಾರ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ. 
ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ /ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಲಾಗಿದೆ.  
 ಸಾರ್ವಜನಿಕ ಸುವ್ಯಸವ್ಥೆಗೆ ಭಾದೆಯನ್ನುಂಟು ಮಾಡಬಹುದಾದ, ರಾಜ್ಯದ ಭದ್ರತೆಯನ್ನು ಕಡೆಗಣಿಸಬಹುದಾದ ಅಥವಾ ಅಪರಾಧವನ್ನು ಮಾಡಲು ಪ್ರಚೋಧಿಸಬಹುದಾದ ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಉಪಯೋಗ ಮಾಡುವುದು ಮತ್ತು ಚಿತ್ರಗಳನ್ನು, ಸಂಕೇತಗಳನ್ನು ಭಿತ್ತಿ ಪತ್ರಗಳನ್ನು ಇತರ ಯವುದೇ ವಸ್ತು ಅಥವಾ ಪದಾರ್ಥವನ್ನು ತಯಾರಿಸುವುದು, ಪ್ರದರ್ಶಿಸುವುದನ್ನು  ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ. 

ಈ ಆದೇಶವು ಸರ್ಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ-ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಮತ್ತು ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ಸಿಬ್ಬಂದಿಗಳು ಅವರ ಚುನಾವಣಾ ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು