9:11 AM Sunday17 - January 2021
ಬ್ರೇಕಿಂಗ್ ನ್ಯೂಸ್
ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ

ಇತ್ತೀಚಿನ ಸುದ್ದಿ

ಗ್ರಾಪಂ ಚುನಾವಣೆ: ಶ್ರೀನಿವಾಸಪುರ ತಾಲೂಕಿನಲ್ಲಿ ಶೇ.88.68 ಮತದಾನ

December 22, 2020, 8:11 PM

ಕೋಲಾರ(reporterkarnataka news): ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಬೆಳಿಗ್ಗೆ ಮಂದಗತಿಯಲ್ಲಿ ನಡೆದ ಮತದಾನ ಮಧ್ಯಾಹ್ನದ ಹೊತ್ತಿಗೆ ಚುರುಕು ಪಡೆದುಕೊಂಡಿತು. ಪುರುಷ ಹಾಗೂ ಮಹಿಳಾ ಮತದಾರರು ಮತಗಟ್ಟೆಗಳ ಮುಂದೆ ಅಂತರ ಪಾಲನೆಯೊಂದಿಗೆ ಪ್ರತ್ಯೇಕ ಸಾಲುಗಳಲ್ಲಿ ನಿಂತು ಮತದಾನ ಮಾಡಿದರು. 

ಒಟ್ಟು 1,42,229 ಮತದಾರ ಪೈಕಿ, 123095 ಮತದಾರರು ಮತದಾನ ಮಾಡಿದ್ದಾರೆ. ಅದರಲ್ಲಿ ಮತದಾನ ಮಾಡಿರುವ 62803 ಪುರುಷ ಹಾಗೂ 60767 ಮಹಿಳಾ ಸೇರಿದ್ದಾರೆ. ತಾಲ್ಲೂಕಿನಲ್ಲಿ ಶೇ.88.68ರಷ್ಟು ಮತದಾನವಾಗಿದೆ ಎಂದು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ತಿಳಿಸಿದರು.

  ಮತಾದಾರರು ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿತ್ತು. ಸರತಿ ಸಾಲಿನಲ್ಲಿ ಕಡ್ಡಾಯವಾಗಿ ಅಂತರ ಪಾಲನೆ ಮಾಡುವಂತೆ ಸೂಚಿಸಲಾಗಿತ್ತು. ಪ್ರತಿ ಮತದಾನ ಕೇಂದ್ರದಲ್ಲೂ ಆರೋಗ್ಯ ಇಲಾಖೆ ವತಿಯಿಂದ ಮತದಾರರ ಕೈಗೆ ಸ್ಯಾನಿಟೈಸರ್‌ ಹಾಕಲಾಯಿತು.

  ತಾಲ್ಲೂಕಿಲ್ಲಿ ಚುನಾವಣೆ ನಡೆದ 25 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿದ್ದ 253 ಮತಗಟ್ಟೆಗಳಲ್ಲಿ ಚುನಾವಣಾ ಕಾರ್ಯ ನಿರ್ವಹಿಸಲು1265 ಸಿಬ್ಬಂದಿಯನ್ನು ನೇಮಿಸಲಾಗಿತ್ತು. ಮತಗಟ್ಟೆಗಳ ರಕ್ಷಣೆ ಹಾಗೂ ಸುವ್ಯವಸ್ಥೆ ಪಾಲನೆಗೆ 350 ಪೊಲೀಸ್‌ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗಿತ್ತು. ಮತದಾನ ಮುಗಿದ ಬಳಿಕ ಮತ ಪೆಟ್ಟಿಗೆಗಳು ಹಾಗೂ ಅವುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸೀಲ್‌ ಮಾಡಿ, ಪಟ್ಟಣದ ಕಾಲೇಜು ಮೈದಾನದಲ್ಲಿ ಸ್ಥಾಪಿಸಲಾಗಿದ್ದ ಸ್ವೀಕರಣ ಕೇಂದ್ರದಲ್ಲಿ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು