3:05 PM Friday26 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಎಸ್ಸೆಸ್ಸೆಲ್ಸಿ ಸ್ಟೇಟ್ ಸಿಲೆಬಸ್ ವಿದ್ಯಾರ್ಥಿಗಳಿಗೆ 3 ತಿಂಗಳ ಕ್ರ್ಯಾಶ್ ಕೋರ್ಸ್: ಶ್ಲಾಘ್ಯದಲ್ಲಿ ಅಡ್ಮಿಷನ್ ಆರಂಭ ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ…

ಇತ್ತೀಚಿನ ಸುದ್ದಿ

ಐತಿಹಾಸಿಕ ಗುಜ್ಜರಕೆರೆ ಅಭಿವೃದ್ಧಿ ಕಾಮಗಾರಿಗೆ ಇನ್ನಷ್ಟು ವೇಗ: ಶಾಸಕ ವೇದವ್ಯಾಸ ಕಾಮತ್

September 7, 2020, 9:30 AM

ಮಂಗಳೂರು(reporterkarnataka news): ಮಂಗಳಾದೇವಿ ಸಮೀಪದ ಐತಿಹಾಸಿಕ ಗುಜ್ಜರಕೆರೆ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿದ್ದು, ಮಾದರಿ ಕೆರೆಯಾಗಿ ಮಾಡಲಾಗುವುದು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.

ಗುಜ್ಜರಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಲು ಸ್ಥಳಕ್ಕೆ ಆಗಮಿಸಿದ ಅವರು ಮಾತನಾಡಿ, ಮಂಗಳೂರು ನಗರ ದಕ್ಷಿಣ ವ್ಯಾಪ್ತಿಯಲ್ಲಿ ಅನೇಕ ಪುರಾತನ ಕೆರೆಗಳು ನಾಮಾವಶೇಷವಾಗಿದೆ. ಈ ಕೆರೆಗಳನ್ನು ಅಭಿವೃದ್ಧಿಪಡಿಸಿ ಮುಂದಿನ ಪೀಳಿಗೆಗೆ ನೀಡುವ ಜವಬ್ದಾರಿ ನಮ್ಮದಾಗಿದೆ ಎಂದರು.

ಗುಜ್ಜರಕೆರೆ ಅಭಿವೃದ್ಧಿಯ ಕುರಿತು ಅನೇಕ ವರ್ಷಗಳಿಂದ ಇಲ್ಲಿನ ಸಾರ್ವಜನಿಕರು ಮನವಿ‌ ಸಲ್ಲಿಸುತ್ತಿದ್ದಾರೆ. ಕೆರೆಯ ವಿಚಾರದಲ್ಲಿ ಧಾರ್ಮಿಕತೆಗೆ ಸಂಬಂಧಿಸಿದಂತೆ ಈ ಪರಿಸರದ ಜನರು ಅನನ್ಯ ಸಂಬಂಧ ಹೊಂದಿದ್ದಾರೆ. ಹಾಗಾಗಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೆರೆಯ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಅವರು ನುಡಿದರು.

ಈಗಾಗಲೇ ಕೆರೆಯ ಹೂಳೆತ್ತುವ ಕಾರ್ಯ ನಡೆಯುತ್ತಿದೆ. ಸರಿ ಸುಮಾರು 15 ಅಡಿಗಳಷ್ಟು ಆಳ ಹೂಳು ತುಂಬಿಕೊಂಡಿದೆ. ಸಂಪೂರ್ಣವಾಗಿ‌ ಸ್ವಚ್ಛಗೊಳಿಸಿದ ನಂತರ ನೀರು ಕಲುಷಿತಗೊಳ್ಳದಂತೆ, ತಡೆಗೋಡೆಗಳ ದುರಸ್ತಿ ಹಾಗೂ ಕೆರೆಯ ನೀರು ಉಪಯೋಗಕ್ಕೆ ಯೋಗ್ಯವಾಗುವಂತೆ ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು‌ ಅವರು

ತಿಳಿಸಿದರು.

ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೇರೇಟರ್ ರೇವತಿ‌ ಶ್ಯಾಮ್ ಸುಂದರ್, ಪಾಲಿಕೆಯ ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿ ಅದ್ಯಕ್ಷರಾದ ಪೂರ್ಣಿಮಾ, ಪಾಲಿಕೆ ಸದಸ್ಯರಾದ ಸುಧೀರ್ ಶೆಟ್ಟಿ ಕಣ್ಣೂರು, ಭಾನುಮತಿ, ಶೈಲೇಶ್ ಶೆಟ್ಟಿ, ಬಿಜೆಪಿ ಮುಖಂಡರಾದ ದೀಪಕ್ ಪೈ, ಭಾರತಿ ರಾವ್, ಯಶವಂತ್, ರಾಜೇಂದ್ರ, ದಿನೇಶ್, ಶಿವಪ್ರಸಾದ್, ಪ್ರಮೋದ್, ಪುಷ್ಪರಾಜ್ ಶೆಟ್ಟಿ, ಸುನಿಲ್ ಸಾಲ್ಯಾನ್, ದಿನೇಶ್, ಸುಜಾತಾ ಆಳ್ವ, ಹೇಮಾ ಅರಕೆರೆ, ಅನಿಲ್ ಕೊಟ್ಟಾರಿ, ಅಮಿತ್ ಶೆಟ್ಟಿ, ಗುಜ್ಜರಕೆರೆ ತೀರ್ಥ ಸಮಿತಿಯ ಪ್ರಮುಖರಾದ ನೇಮು ಕೊಟ್ಟಾರಿ, ತಾರನಾಥ ಶೆಟ್ಟಿ, ಯೋಗಿಶ್ ಕುಮಾರ್, ಸಿ.ಪಿ ದಿನೇಶ್, ಉದಯ್ ಶಂಕರ್, ಉಮಾ ಶಂಕರ್, ನಾರಾಯಣ ಶೆಟ್ಟಿ, ಮಾಧವ ವೆಂಕಟೇಶ್ ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು