9:48 AM Friday4 - December 2020
ಬ್ರೇಕಿಂಗ್ ನ್ಯೂಸ್
ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ… ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕ ಜಯಂತಿ ಆಚರಣೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಫುಡ್ ಡೆಲಿವರಿ ಬಾಯ್ ಪೊಲೀಸ್ ವಶಕ್ಕೆ ಪಿಎಫ್ಐ ಅಧ್ಯಕ್ಷರ ಎರಡೂ ನಿವಾಸಗಳ ಮೇಲೆ ಇಡಿ ದಾಳಿ: ಶೋಧ ಕಾರ್ಯ ಆರಂಭ

ಇತ್ತೀಚಿನ ಸುದ್ದಿ

ಗುರುಪುರ: 3 ಕೋಟಿಗೂ ಅಧಿಕ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿಪೂಜೆ

October 24, 2020, 5:23 PM

ಸುರತ್ಕಲ್(reporterkarnataka news): ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3 ಕೋಟಿ ರೂಪಾಯಿಗೂ ಅಧಿಕ ಅನುದಾನದಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಶನಿವಾರ ಗುದ್ದಲಿಪೂಜೆ ಮತ್ತು ಉದ್ಘಾಟನೆ ನೆರವೇರಿಸಿದರು.

20 ಲಕ್ಷ ರೂಪಾಯಿ ಅನುದಾನದಲ್ಲಿ  ಮೂಳೂರು ಗ್ರಾಮದ ಸದಾಶಿವ ದೇವಸ್ಥಾನ ರಸ್ತೆ ಅಭಿವೃದ್ದಿ ಗುದ್ದಲಿ ಪೂಜೆ, 20 ಲಕ್ಷ ರೂಪಾಯಿ ಅನುದಾನದಲ್ಲಿ ಮೂಳೂರು ಗ್ರಾಮದ ಜಂಗಮ ಮಠ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ, 10 ಲಕ್ಷ ರೂಪಾಯಿ ಅನುದಾನದಲ್ಲಿ  ಮೂಳೂರು ಗ್ರಾಮದ ವನಭೋಜನ ಬರ್ಕೆ ರಸ್ತೆ ಉದ್ಘಾಟನೆ, ಮೂಳೂರು ಗ್ರಾಮದ ಬಂಗ್ಲೆಗುಡ್ಡೆ ಯಲ್ಲಿ 16 ಲಕ್ಷ ಅನುದಾನದಲ್ಲಿ ಹೊಸ ಅಂಗನವಾಡಿ ರಚನೆಗೆ ಶಿಲಾನ್ಯಾಸ, 5 ಲಕ್ಷ ರೂಪಾಯಿ ಅನುದಾನದಲ್ಲಿ ಅಡ್ಡೂರ್ ಗ್ರಾಮದ ನಂದ್ಯಾ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿ ನೆರವೇರಿಸಿದರು.

ಶಾಸಕರೊಂದಿಗೆ ಗುರುಪುರ ಮಹಾ ಶಕ್ತಿಕೇಂದ್ರ ಅಧ್ಯಕ್ಷರಾದ ಸೋಹನ್ ಅತಿಕಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ,  ಉತ್ತರ ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂದೇಶ್ ಜಿ. ಕೆ., ಮಂಡಲ ಎಸ್ ಟಿ ಮೋರ್ಚಾದ ಉಪಾಧ್ಯಕ್ಷ ರಾಜೇಂದ್ರ ನಾಯ್ಕ್ ಮಂಡಲ ಸದಸ್ಯರಾದ ಜಲಜ ಕೆ ಶೋಭಾ ದಾಮೋದರ್ ಶೈಲಜಾ,  ಗುರುಪುರ ಶಕ್ತಿ ಕೇಂದ್ರ ಪ್ರಮುಖ್ ಶ್ರೀಕರ ವಿ. ಶೆಟ್ಟಿ, ಸಹ ಪ್ರಮುಖ್ ವಿನೋದ್ ಬರ್ಕೆ,  ಬೂತ್ ಅಧ್ಯಕ್ಷರಾದ ಹೇಮಚಂದ್ರ ,ರಾಜೇಶ್ ಶೆಟ್ಟಿ, ವಿನಯ್q ಓಂಕಾರ್, ಚರಣ್ ಹಿರಿಯರಾದ   

ಪುರಂದರ ಮಲ್ಲಿ, ಸತೀಶ್ ಕಾವ,ರಮಾನಂದ ಶೆಟ್ಟಿ ಪಕ್ಷದ ಪ್ರಮುಖರಾದ ಸಚಿನ್ ಶೆಟ್ಟಿ, ಸೇಸಮ್ಮ, ಶ್ಯಾಮ್ ಆಚಾರ್ಯ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು