1:23 AM Sunday24 - January 2021
ಬ್ರೇಕಿಂಗ್ ನ್ಯೂಸ್
ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!… ವಿವಾದಾತ್ಮಕ ವಾಟ್ಸಾಪ್ ಚಾಟ್ : ಮಹಾರಾಷ್ಟ್ರ ಸರಕಾರದಿಂದ ಅರ್ನಾಬ್ ಮತ್ತೆ ಬಂಧನ ಸಾಧ್ಯತೆ ವೈರಲ್ ಆಗುತ್ತಿದೆ ಕೆ.ಎಲ್. ರಾಹುಲ್ – ಆಶಿಕಾ ರಂಗನಾಥ್ ಜೋಡಿಯ ಫೋಟೋ: ನೆಟ್ಟಿಗರಿಂದ… ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲೂ ನಡೆಯಲಿದೆ ರೈತ- ಕಾರ್ಮಿಕರ ಟ್ರ್ಯಾಕ್ಟರ್ ಪರೇಡ್  ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕೆಪಿಎಸ್ ಇ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಬಂಧಿತರಿಂದ 24 ಲಕ್ಷ ರೂ.… ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆಯಿತೇ ರಹಸ್ಯ ಸಭೆ: ಬಿಜೆಪಿಯೊಳಗಿನ ಮುನಿಸು ತಣ್ಣಗಾಗಿಲ್ವೇ? 

ಇತ್ತೀಚಿನ ಸುದ್ದಿ

ಹಕ್ಕಿಜ್ವರ ಬಾಧೆ: ಕೇರಳದಿಂದ ರಾಜ್ಯಕ್ಕೆ ಕೋಳಿ ಸಾಗಾಟಕ್ಕೆ ನಿರ್ಬಂಧ; ಗಡಿಯಲ್ಲಿ ತಪಾಸಣೆ

January 8, 2021, 8:34 AM

ಮಂಗಳೂರು(reporterkarnataka news):

ಕೇರಳದಿಂದ ಜಿಲ್ಲೆಗೆ ಬರುವ ಎಲ್ಲ ರೀತಿಯ ಕುಕ್ಕುಟ ಮತ್ತು ಕುಕ್ಕುಟ ಉತ್ಪನ್ನಗಳ ಸಾಗಾಣಿಕೆಯನ್ನು ನಿರ್ಬಂಧಿಸಬೇಕು. ಕೇರಳ ರಾಜ್ಯಕ್ಕೆ ಜಿಲ್ಲೆಯಿಂದ ರವಾನಿಸುವ ಕುಕ್ಕುಟ ಹಾಗೂ ಕುಕ್ಕುಟ ಉತ್ಪನ್ನಗಳ ವಾಹನಗಳನ್ನು ರಾಜ್ಯಮಟ್ಟದ ಗಡಿ ಭಾಗದಲ್ಲಿ ನಂಜು ನಾಶಕ ಔಷಧ ಸಿಂಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಹೇಳಿದರು.

ಅವರು ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಕೋಳಿ ಜ್ವರ ರೋಗದ ಹರಡುವಿಕೆ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಕೇರಳದ ಕೊಟ್ಟಾಯಂ ಮತ್ತು ಅಲಾಪುಳ್ಳ ಜಿಲ್ಲೆಯಲ್ಲಿ ಬಾತುಕೋಳಿಗಳಲ್ಲಿ ಕೋಳಿ ಶೀತ ಹಕ್ಕಿಜ್ವರ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಈ ರೋಗ ಹರಡುವ ಸಾಧ್ಯತೆ ಇದೆ. ಇದರ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ

ಸೂಚನೆ ನೀಡಿದರು.

ಜಿಲ್ಲೆಯ ಎಲ್ಲ ಕುಕ್ಕುಟ ಕ್ಷೇತ್ರಗಳಲ್ಲಿ ವಿಶೇಷವಾಗಿ ಪಕ್ಷಿಧಾಮ, ನೀರು ಸಂಗ್ರಹ ಸ್ಥಳಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು, ಕೋಳಿ ಫಾರಂಗಳಲ್ಲಿ ಸ್ವಚ್ಛತೆಗೆ ಮಾಲೀಕರು ಅಗತ್ಯ ಕ್ರಮ ವಹಿಸುವುದರ ಜತೆಗೆ ಅನಗತ್ಯವಾಗಿ ಜನರ ಓಡಾಟ ನಿರ್ಬಂಧಿಸಬೇಕು ಎಂದರು.

ಕೋಳಿ ಶೀತ ಜ್ವರದ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರೊಂದಿಗೆ ರೋಗ ಹರಡದಂತೆ ಅಗತ್ಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ನುಡಿದರು.

ಕೋಳಿಗಳಲ್ಲಿ ಯಾವುದೇ ರೀತಿಯ ಅಸಹಜ ಸಾವು ಹಾಗೂ ಹಕ್ಕಿ ಜ್ವರ ಲಕ್ಷಣ ಕಂಡುಬಂದ್ದಲ್ಲಿ ತಕ್ಷಣವೇ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು ಎಂದರು. ಆ ರೋಗದ ಪರಿಶೀಲನೆ ಮತ್ತು ರೋಗದ ಕಣ್ಗಾವಲನ್ನು ನಿಗಾ ವಹಿಸಲು ಜಿಲ್ಲೆಯಲ್ಲಿರುವ ಕೋಳಿ ಫಾರಂಗೆ ಪಶುಪಾಲನಾಧೀಕಾರಿಗಳು ಆಗಿಂದ್ದಾಗೆ ಭೇಟಿ ನೀಡಬೇಕೆಂದು ಸೂಚನೆ ನೀಡಿದರು.
[08/01, 8:17 am] Askok Sir Vk: ಕೇಂದ್ರ ಸರಕಾರದ ಕೃಷಿ ವಿಧೇಯಕ: ರೈತರ 

ಜತೆ ಇಂದು ಎಂಟನೇ ಸುತ್ತಿನ ಮಾತುಕತೆ

ನವದೆಹಲಿ(reporterkarnataka news): ಪ್ರತಿಭಟನಾ ನಿರತ ರೈತರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಇಂದು ಕೇಂದ್ರ ಸರ್ಕಾರ ಮತ್ತು ರೈತರ ಮಧ್ಯೆ ಎಂಟನೆ ಸುತ್ತಿನ ಮಾತುಕತೆ ನಡೆಯಲಿದೆ.

ಆದರೆ ಈ ಮಾತುಕತೆ  ಯಶಸ್ವಿಯಾಗುವ ಸಾಧ್ಯತೆ ಕಡಿಮೆಯಾಗಿದೆ. ಸರ್ಕಾರ ಮೊದಲು ಕೃಷಿ ತಿದ್ದುಪಡಿ ಕಾನೂನು ರದ್ದು ಪಡಿಸಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ.

ಇಂದು ಮಾತುಕತೆ ವಿಫಲವಾದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆಯುವ ಸಾಧ್ಯತೆಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು