8:38 PM Tuesday25 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ಹಕ್ಕುಪತ್ರ ನೀಡಲು ಹಿಂದೇಟು: ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಒಂಟಿ ಮೌನ ಪ್ರತಿಭಟನೆ

05/09/2023, 21:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಕ್ಕುಪತ್ರ ನೀಡಲು ಹಿಂದೇಟು ನೀತಿ ಅನುಸರಿಸುವುದನ್ನು ಪ್ರತಿಭಟಿಸಿ ಮೂಡಿಗೆರೆ ತಾಲ್ಲೂಕಿನ ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಮೂಡಿಗೆರೆ ಮಿನಿ ವಿಧಾನಸೌಧದ ಎದುರು ಏಕಾಂಗಿಯಾಗಿ ಮೌನ ಪ್ರತಿಭಟನೆ ಮಾಡುತ್ತಿದ್ದಾರೆ.


ಎರಡು ವರ್ಷಗಳಿಂದ ನಿಡುವಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರ್ಕಲ್ ನಿಡುವಳೆ ಗ್ರಾಮದ 70ಕ್ಕೂ ಹೆಚ್ಚು ಗ್ರಾಮಸ್ಥರು 94 ಸಿಯಲ್ಲಿ ಅರ್ಜಿ ಸಲ್ಲಿಸಿದ್ದು ಅದರಲ್ಲಿ 30 ಜನರು ಸರ್ಕಾರಕ್ಕೆ ಹಣವನ್ನು ಪಾವತಿ ಮಾಡಿದ್ದಾರೆ. ಆದರೆ ಮೂಡಿಗೆರೆ ತಹಶೀಲ್ದಾರ್ ಅವರು ಹಕ್ಕುಪತ್ರ ನೀಡಲು ಹಿಂದೇಟು ಹಾಕುತ್ತಿದ್ದು ಇದರಿಂದ ಬೇಸತ್ತು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿಯವರು ಮೌನ ಪ್ರತಿಭಟನೆ ಆರಂಭಿಸಿದ್ದಾರೆ. ಗ್ರಾಮ ಪಂಚಾಯತಿ ಉಪಾಧ್ಯಕ್ಷ ನವೀನ್ ಹಾವಳಿ ಮಾತನಾಡಿ ಈ ಭಾಗದಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸ ಮಾಡುತ್ತಿದ್ದು 94 ಸಿ ಅರ್ಜಿ ಸಲ್ಲಿಸಿ ಎರಡು ವರ್ಷ ಕಳೆದರೂ ಹಕ್ಕುಪತ್ರ ನೀಡದೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ. ಗ್ರಾಮಸ್ಥರು ಕಚೇರಿಗಳಿಗೆ ಅಲೆದು ಅಲೆದು ರೋಸಿ ಹೋಗಿದ್ದಾರೆ. ಇದರಿಂದ ಖುದ್ದಾಗಿ ನಾನೇ ಬಂದರು ಮೂಡಿಗೆರೆ ತಾಲೂಕು ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಅದರಿಂದ ಬೇಸತ್ತು ಮೌನ ಪ್ರತಿಭಟನೆ ಮಾಡುತ್ತಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು