ಇತ್ತೀಚಿನ ಸುದ್ದಿ
ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್ ಕುಮಾರ್ ಕಟೀಲ್
January 17, 2021, 10:47 PM

ಬೆಳಗಾವಿ(reporterkarnataka news): ಹಳ್ಳಿ ಹಳ್ಳಿಗಳಲ್ಲಿ ಕಾಂಗ್ರೆಸ್ ಮುಕ್ತ ವಾತಾವರಣ ನಿರ್ಮಾಣವಾಗಿದೆ. ಹಳ್ಳಿಗಳಿಗೂ ನಮ್ಮ ಬೇರು ವ್ಯಾಪಿಸಿರುವುದು ಸಾಬೀತಾಗಿದೆ. 45 ಸಾವಿರ ಬಿಜೆಪಿ ಬೆಂಬಲಿತರು ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿ ಜನಸೇವಕ ಸಮಾವೇಶ ಸಮಾರೋಪದಲ್ಲಿ ಭಾನುವಾರ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರ ರಹಿತವಾಗಿ ಆಡಳಿತ ನಡೆಸುತ್ತಿರುವುದು ಹಾಗೂ ಯಡಿಯೂರಪ್ಪ ನೇತೃತ್ವದ ಸರ್ಕಾರದಿಂದ ಇದು ಸಾಧ್ಯವಾಗಿದೆ ಎಂದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಸಚಿವ ಉಮೇಶ ಕತ್ತಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಮಾತನಾಡಿದರು.
ಬಿಜೆಪಿ ಜನಪ್ರತಿನಿಧಿಗಳು, ಸಚಿವ, ಶಾಸಕರು, ಬಿಜೆಪಿ ಮುಖಂಡರು
ಉಪಸ್ಥಿತರಿದ್ದರು.