3:59 AM Thursday25 - February 2021
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯರಿಗೆ ತಲೆ ಸರಿ ಇಲ್ಲ, ವಕೀಲ ಅಂತ ಹೇಳಿಕೊಳ್ಳಲು ನಾಚಿಗೆಯಾಗಬೇಕು: ಈಶ್ವರಪ್ಪ ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ: ಒಂದೇ ತಿಂಗಳಲ್ಲಿ 3ನೇ ಬಾರಿ… ಇಂಧನ ಬೆಲೆಯೇರಿಕೆ, ಇ- ವೇ ಬಿಲ್ ಖಂಡಿಸಿ ನಾಳೆ ಭಾರತ ಬಂದ್ :… ಶ್ರೀನಿವಾಸಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿರ್ಮೂಲನೆ ಕಾರ್ಯಕ್ರಮ ರೋವರ್ ನಿಂದ ಮಂಗಳನ ಮಣ್ಣು ಹಾಗೂ ಕಲ್ಲಿನ  ಸ್ಯಾಂಪಲ್ ಸಂಗ್ರಹ: ಹಾಗಾದರೆ ಅದನ್ನು… ಕಟೀಲು ಮೇಳ ಸೇವೆ ಆಟಗಳು: ಎಲ್ಲಿ ಏನೇನು? ನೀವೇ ಓದಿ ನೋಡಿ ತಂಬಾಕು ಜಾಗೃತಿ ಮೂಡಿಸಲು ‘ಗುಲಾಬಿ ಅಭಿಯಾನ’:  ಬೆಳುವಾಯಿ ಶಾಲಾ ಮಕ್ಕಳಿಂದ ಜಾಥಾ ಪೇಜಾವರ ಶ್ರೀಗಳಿಗೆ ಗುರು ವಂದನೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ… ಆವಿಷ್ಕಾರ ಮತ್ತು ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಮಂಗಳೂರು ಅಭಿವೃದ್ಧಿ: ಡಿಸಿಎಂ ಡಾ. ಅಶ್ವಥನಾರಾಯಣ ಜನರು ಮಾಸ್ಕ್ ಧರಿಸದಿದ್ದರೆ ಮತ್ತೆ ಲಾಕ್ ಡೌನ್: ಮುಖ್ಯಮಂತ್ರಿ ನಾಗರಿಕರಿಗೆ ಎಚ್ಚರಿಕೆ

ಇತ್ತೀಚಿನ ಸುದ್ದಿ

ಹತ್ರಾಸ್ ಅತ್ಯಾಚಾರದ ವಿರುದ್ಧ ಬಂಟ್ವಾಳದಲ್ಲಿ ಎಬಿವಿಪಿ ಬೃಹತ್ ಪ್ರತಿಭಟನೆ

October 5, 2020, 3:54 PM

ಬಂಟ್ವಾಳ(reporterkarnataka news):

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಮನಿಷಾ ವಾಲ್ಮೀಕಿ ಎಂಬ ಯುವತಿಯ ಅತ್ಯಾಚಾರ ಪ್ರಕರಣ ವನ್ನು ಖಂಡಿಸಿ ಬಿ.ಸಿ ರೋಡಿನ ಮಿನಿ ವಿಧಾನಸೌಧ ದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಪ್ರೊ.ನಾರಾಯಣ ಭಂಡಾರಿ ಮಾತನಾಡಿದರು. ಸಮಾಜದ ಯುವ ಜನರು ಸಂಸ್ಕಾರವಂತ ಶಿಕ್ಷಣ ಪಡೆದಾಗ ಮಾತ್ರ ಇಂತಹ ಪ್ರಕರಣಗಳು ಕಡಿಮೆಯಾಗುತ್ತದೆ ಹಾಗೂ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಮರುಕಳಿಸಬಾರದೆಂದಿದ್ದರೆ ಕಠಿಣ ಕಾನೂನಿನ ಜಾರಿಯಾಗಬೇಕು ಆಗ ಮಾತ್ರ ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಪ್ರತಿಭಟನೆ ಬಳಿಕ ಅಭಾವಿಪ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಷ್ಟಪತಿಗಳಿಗೆ ಮನಿಷಾ ವಾಲ್ಮೀಕಿ ಅತ್ಯಾಚಾರಿಗಳಿಗೆ ಮರಣ ದಂಡನೆ ವಿಧಿಸಬೇಕು ಹಾಗೂ ಅತ್ಯಾಚಾರ ತಡೆಗೆ ಕಠಿಣ ಕಾನೂನಿನ ರಚನೆಯಾಗಬೇಕೆಂದು ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ಸಂಚಾಲಕರಾದ ಆಶಿಶ್ ಅಜ್ಜಿಬೆಟ್ಟು, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಅಖಿಲಾಷ್, ತಾಲೂಕು ಸಂಚಾಲಕರಾದ ಹರ್ಷಿತ್ ಕೊಯಿಲ, ತಾಲೂಕು ಸಹ ಸಂಚಾಲಕರಾದ ದಿನೇಶ್ ಕೊಯಿಲ, ಸಿದ್ದಕಟ್ಟೆ ಘಟಕದ ಅದ್ಯಕ್ಷರಾದ ಗುರುಪ್ರಸಾದ್, ಚೇತನ್ ಒಕ್ಕೆತ್ತೂರು, ಆಕಾಶ್ , ಮಹೇಶ್, ಹರ್ಷಿತ್ ಅರಳ, ನಿತಿನ್ ಸಿದ್ದಕಟ್ಟೆ, ತಿಲಕ್ ಶೆಟ್ಟಿ ಪೂಂಜ, ನಾಗರಾಜ್ ಶೆಣೈ, ಅನೀಶ್ ಚೇಳೂರು, ಸುಮಂತ್, ಲಿಖಿತ್  ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು