12:49 PM Sunday28 - February 2021
ಬ್ರೇಕಿಂಗ್ ನ್ಯೂಸ್
ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ ಕಾನೂನಿನ ಸಮರ್ಪಕ ಜಾರಿಯಿಂದ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ: ಗಾಂವ್ಕರ್ ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಪಶ್ಚಿಮ ಬಂಗಾಳದಲ್ಲಿ 8 ಹಂತಗಳ ಚುನಾವಣೆ; ಮೇ…

ಇತ್ತೀಚಿನ ಸುದ್ದಿ

ಉತ್ತರ ಪ್ರದೇಶದ ಹತ್ರಾಸ್  ಬಿಗಿ ಭದ್ರತೆ: ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೂ ನಿರ್ಬಂಧ !

October 2, 2020, 5:14 PM

ಲಕ್ನೋ(reporterkarnataka news): ಸಾಮೂಹಿಕ ಅತ್ಯಾಚಾರದ ಬಳಿಕ ಯುವತಿ ಸಾವನ್ನಪ್ಪಿರುವ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಘಟನಾ ಸ್ಥಳಕ್ಕೆ ಮಾಧ್ಯಮ  ಪ್ರತಿನಿಧಿ ಸೇರಿದಂತೆ ಎಲ್ಲರ ಪ್ರವೇಶದ ಮೇಲೆ ನಿರ್ಬಂಧ ವಿಧಿಸಲಾಗಿದೆ. ಹತ್ರಾಸ್ ನಲ್ಲಿ ನಿಷೇಧಾಜ್ಞೆ ಕೂಡ ಜಾರಿಗೊಳಿಸಲಾಗಿದೆ.

ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದೆ. ಅದು ತನಿಖೆ ಪೂರ್ಣಗೊಳಿಸುವ ತನಕ ಈ ನಿರ್ಬಂಧ ಜಾರಿಯಲ್ಲಿ ಇರಲಿದೆ ಎಂದು ಹತ್ರಾಸ್ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹೇಳಿದ್ದಾರೆ.

ಇದೇ ವೇಳೆ ಪ್ರಕರಣ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಪ್ರತಿಕ್ರಿಯಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆಗೆ ಸರ್ಕಾರ ಬದ್ಧವಾಗಿದೆ. ಅಪರಾಧಿಗಳಿಗೆ ಮಾದರಿ ಶಿಕ್ಷೆ ನೀಡಲು ಸರ್ಕಾರ ಹಿಂಜರಿಯದು  ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು