ಇತ್ತೀಚಿನ ಸುದ್ದಿ
ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್
December 4, 2020, 10:49 AM

ಶಿವಮೊಗ್ಗ(reporterkarnataka news): ಬಜರಂಗ ದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಬಳಿಕ ಹಿಂಸಾಚಾರ ಸಂಭವಿಸಿದ ಶಿವಮೊಗ್ಗದಲ್ಲಿ ಪರಿಸ್ಥಿತಿ ಇದೀಗ ನಿಯಂತ್ರಣದಲ್ಲಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಬಜರಂಗದಳದ ಕಾರ್ಯಕರ್ತ ನಾಗೇಶ್ ಎಂಬವರ ಮೇಲೆ ಕೆಲವು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು.
ಬಳಿಕ ಎರಡು ಗುಂಪುಗಳು ಕಲ್ಲು ತೂರಾಟ ನಡೆಸಿದ ಪರಿಣಾಮ ಆತಂಕ ಸೃಷ್ಟಿಯಾಗಿತ್ತು. ಇದೀಗ ಪರಿಸ್ಥಿತಿ ಪೂರ್ಣ ನಿಯಂತ್ರಣದಲ್ಲಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.