ಇತ್ತೀಚಿನ ಸುದ್ದಿ
ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ನಿಧನ
December 13, 2020, 2:35 PM

ಉಡುಪಿ(Reporter Karnataka News)
ದೇಶದ ಪ್ರಮುಖ ವಿದ್ವಾಂಸರಾಗಿದ್ದ ಬನ್ನಂಜೆ ಗೋವಿಂದಾಚಾರ್ಯರು(84) ಭಾನುವಾರ ನಿಧನರಾಗಿದ್ದಾರೆ.
ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ 1936ರಲ್ಲಿ ಜನಿಸಿದ್ದ ಅವರು ತಮ್ಮ ಪ್ರವಚನಗಳ ಮೂಲಕ ತತ್ವ ಪ್ರಚಾರ ಕೈಗೊಂಡಿದ್ದರು. ಮಾಧ್ವ ತತ್ವದಲ್ಲಿ ಅಮೋಘ ಪಾಂಡಿತ್ಯವನ್ನು ಸಾಧಿಸಿರುವ ಇವರು ಅನೇಕ ಕೃತಿಗಳನ್ನು ರಚಿಸಿದ್ದರು. ಕನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ.
ಅನೇಕ ಸಂಸ್ಕೃತ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ.