11:13 AM Sunday17 - January 2021
ಬ್ರೇಕಿಂಗ್ ನ್ಯೂಸ್
ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ಭದ್ರಾವತಿ: ಕ್ಷಿಪ್ರ ಕಾರ್ಯಪಡೆ ಕಚೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೂಮಿ… ಕೊರೊನಾ ತಡೆಗೆ ಸ್ವದೇಶಿ ವ್ಯಾಕ್ಸಿನ್ ಭಾರತದ ಸಾಧನೆಯ ಪ್ರತೀಕ: ಪ್ರಧಾನಿ ನರೇಂದ್ರ ಮೋದಿ ಲಿಂಗಸುಗೂರು: ಕೋವಿಡ್ 19 ಲಸಿಕೆ ಬಾಕ್ಸ್ ಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡ ತಾಲೂಕು… ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ: ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಎಸ್.… ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ಬಿದ್ದು ಮೀನುಗಾರ ಸಾವು ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಿಳಾ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋಲಾರ ಜಿಲ್ಲಾಧಿಕಾರಿ… ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ  ದೇರಳಕಟ್ಟೆ ರೆಂಜಡಿಯ ಡಾ. ಅಬ್ದುಲ್ ಶಕೀಲ್ ನೇಮಕ

ಇತ್ತೀಚಿನ ಸುದ್ದಿ

ಹೊಯಿಗೆ ಬೇಕೇ?: ಸ್ಯಾಂಡ್ ಬಜಾರ್ ಆ್ಯಪ್ ಮೂಲಕ ನೀವು ಬುಕ್ ಮಾಡಿ

November 30, 2020, 8:33 PM

ಮಂಗಳೂರು(reporterkarnataka news):

ಇನ್ನು ಜಿಲ್ಲೆಯ ನಾಗರಿಕರು ‘ಸ್ಯಾಂಡ್ ಬಜಾರ್ ಆ್ಯಪ್’ ಮೂಲಕ ಮರಳನ್ನು ಬುಕ್ ಮಾಡಿ ಪಡೆಯಬಹುದಾಗಿದೆ. ಈ ನಿಟ್ಟಿನಲ್ಲಿ 80 ಮಂದಿಗೆ ತಾತ್ಕಾಲಿಕ ಪರವಾನಿಗೆ ನೀಡಲಾಗಿದೆ.

ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ ಮೀನುಗಾರಿಕೆ ದೋಣಿಗಳ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುವ 13 ಮರಳು ದಿಬ್ಬಗಳನ್ನು ತೆರವುಗೊಳಿಸಲಾಗಿದೆ. ಹಾಗೆ ಇದುವರೆಗೆ 80 ಮಂದಿಗೆ ತಾತ್ಕಾಲಿಕ ಪರವಾನಿಗೆ ನೀಡಲಾಗಿದೆ. ತೆರವುಗೊಳಿಸಿದ ಮರಳನ್ನು ‘ಸ್ಯಾಂಡ್ ಬಜಾರ್ ಆ್ಯಪ್’ ಮೂಲಕ ಜಿಲ್ಲೆಯ ಪರಿಮಿತಿಯೊಳಗೆ ಸಾರ್ವಜನಿಕರಿಗೆ ಹಾಗೂ ಸರ್ಕಾರಿ ಮತ್ತು ಇತರೆ ಕಾಮಗಾರಿಗಳಿಗೆ ಮರಳನ್ನು ಪೂರೈಸಲು ನವೆಂಬರ್ 27 ರಿಂದ ಚಾಲನೆ ನೀಡಲಾಗಿದ್ದು, ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕರು, ಗ್ರಾಹಕರು ‘ಸ್ಯಾಂಡ್ ಬಜಾರ್ ಆ್ಯಪ್’ ನಲ್ಲಿ ಬುಕ್ ಮಾಡಿ ಮರಳನ್ನು ಪಡೆಯಬಹುದಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, 1ನೇ ಮಹಡಿ, ಜುಗುಲ್ ಬಿಲ್ಡಿಂಗ್, ಮಲ್ಲಿಕಟ್ಟೆ, ಮಂಗಳೂರು-575002’ ಅಥವಾ ಮೊ.ಸಂ: 6366876888 ನ್ನು ಸಂಪರ್ಕಿಸಬಹುದಾಗಿದೆ ಎಂದು ಮರಳು ಸಮಿತಿಯ ಉಪನಿರ್ದೇಶಕರು ಹಾಗೂ ಅನುಷ್ಠಾನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು