8:44 PM Wednesday20 - January 2021
ಬ್ರೇಕಿಂಗ್ ನ್ಯೂಸ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ 29ರಂದು ಮಂಗಳೂರಿಗೆ ಮಂಗಳೂರು ನಗರದ ಹಲವೆಡೆ ನಾಳೆ, ನಾಳಿದ್ದು ನೀರಿಲ್ಲ: ಯಾವೆಲ್ಲ ಪ್ರದೇಶವೆಂದು ನೀವೇ ಓದಿ ಬೈಕಿಗೆ ಸೈಡ್ ಕೊಡದ ನೆಪದಲ್ಲಿ ಸಿಟಿ ಬಸ್ ಚಾಲಕನಿಗೆ  ಪೆಟ್ರೋಲ್ ಸುರಿದು ಬೆಂಕಿ… ಬಿಲ್ಲವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಬಜೆಟ್ ನಲ್ಲಿ 50… ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ…

ಇತ್ತೀಚಿನ ಸುದ್ದಿ

ಹೊಸ ಪ್ರಭೇದದ ಕೊರೊನಾ ವೈರಸ್ ಪತ್ತೆ:ಯುಕೆ ವಿಮಾನಗಳಿಗೆ ಇಂದಿನಿಂದ ನಿರ್ಬಂಧ

December 22, 2020, 7:56 AM

ಬೆಂಗಳೂರು(reporterkarnataka news):

ಇಂಗ್ಲೆಂಡ್‌ನಲ್ಲಿ ಹೊಸ ಬಗೆಯ ಕೊರೊನಾ ವೈರಾಣು ಕಂಡು ಬಂದ ಹಿನ್ನೆಲೆಯಲ್ಲಿ ಇಂದಿನಿಂದ ಇಂಗ್ಲೆಂಡ್ ನಿಂದ ಬರುವ ವಿಮಾನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಭಾನುವಾರ ರಾಜ್ಯಕ್ಕೆ 291 ಜನರು ಬ್ರಿಟಿಷ್ ಏ ವೇಸ್ ನಿಂದ ಬಂದಿದ್ದರು. 246 ಜನರು ಏರ್ ಇಂಡಿಯಾದಿಂದ ಬಂದಿದ್ದರು. 138 ಜನರು ನೆಗೆಟಿವ್ ವರದಿ ತಂದಿಲ್ಲ. ಇಂತಹವರನ್ನು ಒಂದು ವಾರ ಕಾಲ ಮನೆಯಲ್ಲೇ ನಿಗಾ ಇರಿಸಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ಮಂಗಳವಾರದಿಂದ ವಿಮಾನ ನಿಲ್ದಾಣಗಳಲ್ಲಿ ಕಿಯೋಸ್ಕ್ ಇಟ್ಟು, ಅಲ್ಲಿ ತಪಾಸಣೆ ಮಾಡಲಾಗುವುದು. ಇದು ವೇಗವಾಗಿ ಹರಡುವ ಲಕ್ಷಣ ಹೊಂದಿದ್ದರೂ, ರೋಗದ ತೀವ್ರತೆ ಹೆಚ್ಚಿಸುವುದಿಲ್ಲ. ಆದರೂ ಅತ್ಯಂತ ಎಚ್ಚರಿಕೆ ವಹಿಸಬೇಕಿದೆ ಎಂದು ಸಚಿವರು ಹೇಳಿದರು.

ಯು.ಕೆ., ಡೆನ್ಮಾರ್ಕ್, ನೆದರ್ ಲ್ಯಾಂಡ್ ಮೊದಲಾದ ಐರೋಪ್ಯ ರಾಷ್ಟ್ರಗಳಲ್ಲಿ ಹೊಸ ಬಗೆಯ ವೈರಾಣು ಕಾಣಿಸಿಕೊಂಡಿದೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಪತ್ರ ಬಂದಿದ್ದು, ಮಂಗಳವಾರ ರಾತ್ರಿಯಿಂದ ಯು.ಕೆ.ಯಿಂದ ಬರುವ ವಿಮಾನಗಳ ಆಗಮನ ನಿರ್ಬಂಧಿಸಲಾಗುತ್ತದೆ. 

ಈ ವೈರಾಣು ಹರಡುವ ವೇಗ ಹೆಚ್ಚಿದೆ. ಆದರೆ ರೋಗ ತೀವ್ರವಾಗಿರುವುದಿಲ್ಲ. ಆದ್ದರಿಂದ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕಿದೆ. ಹೊಸ ವರ್ಷದ ಅದ್ದೂರಿ ಆಚರಣೆಗಳನ್ನು ಕೈ ಬಿಡಬೇಕಿದೆ. ಕೆಲ ಹೋಟೆಲ್ ಗಳಲ್ಲಿ ಬುಕಿಂಗ್ ಮಾಡಿ ಆಚರಣೆ ಮಾಡಲು ಸಿದ್ಧತೆ ನಡೆಸಿರುವುದು ಕಂಡುಬಂದಿದೆ. ಹೀಗೆ ಮಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಸರ್ಕಾರಕ್ಕೆ ಜನರ ಆರೋಗ್ಯ ಮುಖ್ಯವಾಗಿದ್ದು, ಹೊಸ ಬಗೆಯ ವೈರಾಣು ಬರುವ ಸಂದರ್ಭದಲ್ಲಿ ಇನ್ನಷ್ಟು ಎಚ್ಚರಿಕೆಯಿಂದ ಇರಬೇಕು ಎಂದರು.

ಕಳೆದ 14 ದಿನಗಳಲ್ಲಿ ಬೇರೆ ದೇಶಗಳಿಂದ ರಾಜ್ಯಕ್ಕೆ ಬಂದವರು ಆರ್ ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು. ಯುನೈಟೆಡ್ ಕಿಂಗ್ ಡಮ್ ನಿಂದ ಬಂದವರು ಹಾಗೂ ಬೇರೆ ದೇಶಗಳಿಂದ ಬಂದವರಿಗೂ 7 ದಿನಗಳ ಕ್ವಾರಂಟೈನ್ ಗೆ ಒಳಪಡಿಸಬೇಕು ಎಂದು ನಿರ್ಧರಿಸಲಾಗಿದೆ. ಯು.ಕೆ.ಯಿಂದ ಬಂದವರನ್ನು 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಬೇಕೆಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ ಎಂದು ತಿಳಿಸಿದರು.

ಶೈಕ್ಷಣಿಕ ಚಟುವಟಿಕೆಗೆ ಸಂಬಂಧಿಸಿದಂತೆ ವಹಿಸಬೇಕಾದ ಎಚ್ಚರಿಕೆ ಕುರಿತು ಮತ್ತೊಮ್ಮೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು