1:20 PM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ಇಡ್ಯಾದ ಅಪಾರ್ಟ್ ಮೆಂಟ್ ನಲ್ಲಿ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

September 22, 2020, 1:53 PM

ಮಂಗಳೂರು(reporterkarnataka news): ಸುರತ್ಕಲ್ ಸಮೀಪದ ಇಡ್ಯಾದ  ಜಾರ್ಡಿನ್ ಅಪಾರ್ಟ್ ಮೆಂಟ್ ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಈ ವಿಷಯ ತಿಳಿಸಿದರು.

ಜಾರ್ಡಿನ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ವಿದ್ಯಾ ಪ್ರಭು ಅವರ ಫ್ಲ್ಯಾಟ್ ಗೆ ರಾತ್ರಿ ವೇಳೆ ಬಾಲ್ಕನಿ ಮೂಲಕ ನುಗ್ಗಿದ ಕಳ್ಳರು ಹಣ ಮತ್ತು ಚಿನ್ನಾಭರಣ ಕಳವು ಮಾಡಿದ್ದರು.

ಈ ಕೃತ್ಯದಲ್ಲಿ ಭಾಗಿಯಾದ ಕೇರಳ ತಿರುವನಂತಪುರಂ ಮೂಲದ ಆರೋಪಿಗಳಾದ  ರಘು ಮತ್ತು ರಮೇಶ್ ಎಂಬ ಇಬ್ಬರನ್ನು ಸೆ. 15 ರಂದು ಸುರತ್ಕಲ್ ಪೊಲೀಸರು ಬಂಧಿಸಿದ್ದರು.

ಅದೇ ಫ್ಲಾಟಿನಲ್ಲಿ ವಾಸ ಮಾಡಿಕೊಂಡು ಸಂಚು ರೂಪಿಸಿದ ನವೀನ್ ಮತ್ತು ಬೆಳ್ತಂಗಡಿಯ ಸಂತೋಷ್ ಎಂಬ ಇಬ್ಬರನ್ನು ಸೆ. 18ರಂದು ಸುರತ್ಕಲ್ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳು ಕಳ್ಳತನ ಮಾಡಿದ ಹಣದಲ್ಲಿ ದುಂದುವೆಚ್ಚ  ಮಾಡಿದ್ದಾರೆ. ಅವರ ವಶದಲ್ಲಿದ್ದ  30,85,710 ರೂ. ನಗದು  ಮತ್ತು 224 ಗ್ರಾಂ ಚಿನ್ನಾಭರಣಗಳನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದ ಕಾರು ಮತ್ತು  ದ್ವಿಚಕ್ರ ವಾಹನವನ್ನು ಸ್ವಾಧೀನಪಡಿಸಲಾಗಿದೆ. ಈ ಪ್ರಕರಣದಲ್ಲಿ ಕೇರಳ ಮೂಲದ ಇನ್ನೂ ಇಬ್ಬರು ಆರೋಪಿಗಳಿದ್ದು ಅವರ ಬಂಧನ ಬಾಕಿ ಇದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು