ಇತ್ತೀಚಿನ ಸುದ್ದಿ
ಇಂದು ಪ್ರಧಾನಿ ಭೇಟಿ ಮಾಡಲಿರುವ ಸಿಎಂ ಯಡಿಯೂರಪ್ಪ: ಏನೆಲ್ಲ ಚರ್ಚೆಗೆ ಬರಲಿದೆ?
September 18, 2020, 7:58 AM

ನವದೆಹಲಿ(reporterkarnataka): ಮುಖ್ಯಮಂತ್ರಿ ಯಡಿಯೂರಪ್ಪ ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಬೆಳಿಗ್ಗೆ 9.15ಕ್ಕೆ ಮಾತುಕತೆ ನಿಗದಿಯಾಗಿದೆ. ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ. ಆರ್ಥಿಕ ಪರಿಸ್ಥಿತಿ ಮತ್ತು ಇತರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಬಿಎಸ್ ವೈ ಪ್ರಧಾನಿ ಮೋದಿ ಜತೆ ಚರ್ಚೆ ನಡೆಸಲಿದ್ದಾರೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಕೂಡ ಪ್ರಧಾನಿ ಜೊತೆ ಸಿಎಂ ಯಡಿಯೂರಪ್ಪ ಮಾತುಕತೆ ನ಼ಡೆಸುವ ಸಾಧ್ಯತೆಗಳಿವೆ. ಭಾನುವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ.