4:39 AM Monday18 - January 2021
ಬ್ರೇಕಿಂಗ್ ನ್ಯೂಸ್
ಜನವರಿ 27, 28 ರಂದು ನಡೆಯಲಿರುವ ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ… ಮಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಹನಿಟ್ರ್ಯಾಪ್ : ಇಬ್ಬರು ಯುವತಿಯರು ಸೇರಿದಂತೆ 4… ಹಳ್ಳಿ ಹಳ್ಳಿಗೂ ಬಿಜೆಪಿ ಬೇರು ವ್ಯಾಪಿಸಿರುವುದು ಗ್ರಾಮ ಪಂಚಾಯಿತಿ ಚುನಾವಣೆಯಿಂದ ಸಾಬೀತು: ನಳಿನ್… ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಂಗ್ರೆಸ್ – ಜೆಡಿಎಸ್ ನೆಲಸಮ: ಬೆಳಗಾವಿ ಸಮಾವೇಶದಲ್ಲಿ… ಮೋದಿ- ಬಿಎಸ್ ವೈ ಜೋಡಿಗೆ ಜನರ ಆಶೀರ್ವಾದ: ಬೆಳಗಾವಿಯಲ್ಲಿ ಗೃಹ ಸಚಿವ ಅಮಿತ್… ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ… ಸಚಿವ ಅಂಗಾರ ತವರಿನಲ್ಲಿ ಕಮಲ ಕದನ: ಬಿಜೆಪಿ ಶಕ್ತಿ ಕೇಂದ್ರದಿಂದ ಸುಳ್ಯ ಮಂಡಲ ಸಮಿತಿಗೆ… ಇಟಗಿಹಾಳ: ಮಧ್ಯದಂಗಡಿ ತೆರವಿಗೆ ಆಗ್ರಹಿಸಿ 3ನೇ ಬಾರಿ ಗ್ರಾಮಸ್ಥರಿಂದ ಭಾರಿ ರಸ್ತೆ ತಡೆ… ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿವೇಕಾ ಸಂದೇಶ 2021’ ಕಾರ್ಯಕ್ರಮ ರಾಜ್ಯದ ಎಲ್ಲ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಇತ್ತೀಚಿನ ಸುದ್ದಿ

Inspiring Story : ಡೇರೆಯಲ್ಲಿ ಬೆಳೆದು ಮೆಡಿಕಲ್ ಬಿಎಸ್ಸಿ ಪದವಿ ಪಡೆದ ಕೂಸು ಇಂದು ಪಾವೂರು ಗ್ರಾಪಂ ಸದಸ್ಯೆ!

December 30, 2020, 4:51 PM

ಮಂಗಳೂರು(reporterkarnataka news):

ತಾನು ಪಟ್ಟ ಕಷ್ಟ ನೋವುಗಳನ್ನು ದಿಟ್ಟವಾಗಿ ಎದುರಿಸಿ ಮೆಡಿಕಲ್ ಬಿಎಸ್‌ಸಿ ಪಡೆದು ತನ್ನ ಕರ್ಮಭೂಮಿಯಲ್ಲೇ ರಾಜಕೀಯ ಪ್ರವೇಶಿಸಿಸಿದ ಪಾವೂರು ಗ್ರಾಪಂ ಬಿಜೆಪಿ ಬೆಂಬಲಿತ ಸದಸ್ಯೆಯಾಗಿ ಆಯ್ಕೆತಾದ ಮಮತಾ ಅವರ ಜೀವನ ಕಥೆಯೇ ಅವರನ್ನು ರಾಜಕೀಯ ಪ್ರವೇಶಿಸಿದಂತೆ ಮಾಡಿದೆ.

ಹೌದು! ಪಾವೂರಿನ ಜನತೆ ತನ್ನ ಕಣ್ಣೆದುರಿಗೆ ಕಷ್ಟ ಪಟ್ಟು ಬೆಳೆದ ಕೂಸು, ಇಂದು ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯೆ ಮಮತಾ ಅವರನ್ನು ಗ್ರಾಮ ಪಂಚಾಯಿತಿ ಸದಸ್ಯೆಯನ್ನಾಗಿ ಆರಿಸಿದ್ದಾರೆ. ಕಳೆದ 3-4 ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯಾರ್ಥಿಗಳೇ ಜಯಗಳಿಸುತ್ತಿದ್ದು, ಇದೇ ಮೊದಲಬಾರಿ ಬಿಜೆಪಿ ಬೆಂಬಲಿತ ಮಮತಾ ಅವರನ್ನು ತಮ್ಮ ಪ್ರತಿನಿಧಿಯಾಗಿ ಗ್ರಾಪಂಗೆ ಪಾವೂರಿನ ಜನತೆ ಮಹುಮತ ನೀಡಿದ್ದಾರೆ.

ಉಡುಪಿ ಮೂಲದವರಾದ ಇವರ ತಂದೆ ಕೃಷ್ಣಪ್ಪ, ತಾಯಿ ಪ್ರೇಮ ವಲಸೆ ಕಾರ್ಮಿಕರಾಗಿ ಊರುರು ಸುತ್ತಿ ಬೀದಿ ಬದಿ ಡೇರೆ ಹಾಕಿ ಜೀವನ ನಡೆಸುತ್ತಿದ್ದರು. 1995ರ ಸಮಯ ಏಕಾಏಕಿ ಕಾಣೆಯಾದ ತಂದೆಯ ನೆನಪಲ್ಲೇ ತಾಯಿ ಪ್ರೇಮ ಹಾಗೂ ಅವರ ಮೂವರು ಮಕ್ಕಳಾದ ಶಿವ, ಬೋಜ, ಮಮತ ಪಜಿರು ಹಾಗೂ ಪಾವೂರು, ಇನೋಳಿಯ ರಸ್ತೆ ಬದಿ, ಶೌಚಕೊಠಡಿ, ದನದಹಟ್ಟಿಯಲ್ಲಿ ವಾಸವಾಗಿದ್ದರು. ಶಿವ ಕ್ಯಾನ್ಸರ್ ಕಾಯಿಲೆ ತುತ್ತಾಗಿ ಅನಾರೋಗ್ಯದಿಂದಿದ್ದರೆ, ಬೋಜ ಹಾಗೂ ಮಮತ ಅವರನ್ನು ಸ್ಥಳೀಯ ಶಿಕ್ಷಕ ಮಧು ಮೇಷ್ಟ್ರ ತನ್ನದೇ ಮುತುವರ್ಜಿಯಲ್ಲಿ ಮಲಾರ್‌ಪದವು ಶಾಲೆಗೆ ಸೇರಿಸಿದ್ದರು.

ಡೇರೆಯಲ್ಲೇ ವಾಸ: ಪತಿ ನಾಪತ್ತೆಯದ ದುಃಖದ ನಡುವೆಯೂ ತಾಯಿ ಪ್ರೇಮ ಸ್ಥಳೀಯ ಕೋರೆ, ಮನೆ ಮನೆ ತೆರಳಿ ಕಾರ್ಮಿಕರಾಗಿ ದುಡಿದು ವಿದ್ಯಾಭ್ಯಾಸ ನಡೆಸುವ ಮಕ್ಕಳ ಜತೆ ಡೇರೆಯಲ್ಲೇ ದಿನ ಕಳೆದಿದ್ದರು. 2006ರಿಂದ ಮಮತ ಅವರು ಮಚ್ಚಿನ ಮೊರಾರ್ಜಿ ದೇಸಾಯಿ ವಿದ್ಯಾಸಂಸ್ಥೆಯಲ್ಲಿ ಪ್ರೌಢ ಶಿಕ್ಷಣ, ದೇರಳಕಟ್ಟೆ ಮೊರಾರ್ಜಿ ದೇಸಾಯಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಿಯುಸಿ ಪಾಸಾಗಿದ್ದರು. ನಂತರ ಮಂಗಳೂರಿನ ಕೊಲಾಸೋ ವಿದ್ಯಾಸಂಸ್ಥೆಯಲ್ಲಿ ಲ್ಯಾಬ್ ಟೆಕ್ಟಿಷಿನ್ ಡಿಪ್ಲಮಾ ಪದವಿ ಪೂರೈಸಿದ್ದರು.

ಕೊಳಗೇರಿಯಲ್ಲಿದ್ದು ಮೆಡಿಕಲ್ ಬಿಎಸ್ಸಿ ಪದವಿ : ಉನ್ನತ ಶಿಕ್ಷಣ ಪಡೆಯಬೇಕೆಂಬ ಆಸೆಯಿಂದ ಸ್ಥಳೀಯ ಪತ್ರಕರ್ತರ ಹಾಗೂ ದಾನಿಗಳ ಸಹಕಾರದಿಂದ ಬೆಂಗಳೂರಿಗೆ ಆಗಮಿಸಿದ ಮಮತ 4 ವರ್ಷಗಳ ಕಾಲ ಬೆಂಗಳೂರು ನಗರದಲ್ಲಿರುವ ಬೆಂಗಳೂರು ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, 2020ರಲ್ಲಿ ಮೆಡಿಕಲ್ ವಿಭಾಗದಲ್ಲಿ ಬಿಎಸ್ಸಿ ಪದವಿಧರೆಯಾಗಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದರು. ಲಕ್ಷಾಂತರ ರೂಪಾಯಿ ವೆಚ್ಚಮಾಡಿ ಶಿಕ್ಷಣ ಪಡೆಯುವ ಸಾವಿರಾರು ವಿದ್ಯಾರ್ಥಿಗಳ ಮಧ್ಯೆ ಬೆಂಗಳೂರಿನ ಆನೆಪಾಳ್ಯ ಎಂಬ ಕೊಳೆಗೇರಿ ಪ್ರದೇಶದಲ್ಲೇ ವಾಸಿಸುತ್ತಲೇ ಮಮತಾ ಅವರು ಮೆಡಿಕಲ್ ಬಿಎಸ್ಸಿ ಪದವಿಧರೆಯಾಗಿದ್ದಾರೆ ಎಂಬುದೇ ವಿಶೇಷ.

ನನ್ನ ಜೀವನ ನನಗೆ ಬದುಕುವ ಪಾಠ ಕಲಿಸಿದೆ. ದೇಶದ ಸಾಮಾಜಿಕ ಹಾಗೂ ರಾಜಕೀಯ ವ್ಯವಸ್ಥೆಯಲ್ಲಿ ಸಂಪತ್ತಿನ ಸಮಾನ ಹಂಚಿಕೆ, ಬಳಕೆಯಾಗದಿರುವುದರಿಂದಲೇ ಹಳ್ಳಿಯ ಜನರು ಬಡತನದಲ್ಲೇ ಕಳೆಯುವಂತಾಗಿದೆ. ನನಗೆ ನನ್ನ ಜೀವನ ರೂಪಿಸುವಂತಹ ಶಿಕ್ಷಣ ದೊರಕಿದ್ದರೇನಂತೆ ಗ್ರಾಮೀಣ ಜನತೆ ಇನ್ನೂ ತಮ್ಮ ಸ್ಟಷ್ಟ ಜೀವನ ರೂಪಿಸುವಂತಹ ವ್ಯವಸ್ಥೆಯಾಗಿಲ್ಲ. ಈನಿಟ್ಟಿನಲ್ಲಿ ನಾನು ಓಡಾಗಿ ಬೆಳೆದ ಹಳ್ಳಿಗೆ ಮತ್ತೆ ಹಿಂತಿರುಗುವ ಯೋಜನೆ ಮಾಡಿದೆ. ಪ್ರಸ್ಥುತ ನನ್ನ ಯೋಜನೆಗೆ ರಾಜಕೀಯ ಬೆಂಬಲವೂ ಸಿಕ್ಕಿದೆ. ನಾನು ನಡೆದು ಬಂದ ಅಲೆಮಾರಿ ಜೀವನ, ಕಷ್ಟದ ದಾರಿ ನನಗೆ ನೆನಪಿದೆ, ಅಂತಹ ಕಷ್ಟ ಮುಂದೆ ಯಾರಿಗೂ ಬರಬಾರದು ಎಂಬ ಆಸೆಯೊಂದಿಗೆ ರಾಜಕೀಯ ಪ್ರವೇಶಿಸಿದ್ದೇನೆ.

– ಮಮತಾ, ಪಾವೂರು ಗ್ರಾಪಂನ ನೂತನ ಸದಸ್ಯೆ

ಇತ್ತೀಚಿನ ಸುದ್ದಿ

ಜಾಹೀರಾತು