ಇತ್ತೀಚಿನ ಸುದ್ದಿ
ಸಚಿವ ಜಲೀಲ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಜಲಫಿರಂಗಿ ಬಳಕೆ
September 13, 2020, 2:29 AM

ತಿರುವನಂತಪುರಂ( reporterkarnataka news): ಕೇರಳದ ಉನ್ನತ ಶಿಕ್ಷಣ ಸಚಿವ ಕೆ. ಟಿ. ಜಲೀಲ್ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ತೀವ್ರಗೊಳಿಸಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಬಳಸಿದ್ದಾರೆ. ಇದರಿಂದ ಹಲವು ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿವೆ. ಇಂದು ಕೂಡ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಹೇಳಿದೆ.
ಈ ಮಧ್ಯೆ ಸಚಿವ ಜಲೀಲ್ ಅವರನ್ನು ಎನ್ ಐ ಎ ಮತ್ತು ಕಸ್ಟಂಮ್ಸ್ ಅಧಿಕಾರಿಗಳು ವಿಚಾರಣೆಗೆ ಗುರಿಪಡಿಸುವ ಸಾಧ್ಯತೆಯಿದೆ. ಸಚಿವ ಜಲೀಲ್ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಗುರಿಪಡಿಸಿದ ಬೆನ್ನಲೇ ಈ ಬೆಳವಣಿಗೆ ನಡೆದಿದೆ.