11:39 PM Wednesday21 - October 2020
ಬ್ರೇಕಿಂಗ್ ನ್ಯೂಸ್

ಇತ್ತೀಚಿನ ಸುದ್ದಿ

ಮೈಸೂರಿನಲ್ಲಿ ನಾಡಹಬ್ಬ ದಸರಾ  ಉದ್ಘಾಟನೆ: ಜಂಬೂ ಸವಾರಿ, ಜನರ ಪ್ರವೇಶಕ್ಕೆ ನಿರ್ಬಂಧ

October 17, 2020, 8:56 AM

ಮೈಸೂರು(reporterkarnataka news): ಕನ್ನಡಿಗರೆಲ್ಲರ ನಾಡ ಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ  ವಿದ್ಯುಕ್ತ ಚಾಲನೆ ನೀಡಲಾಗಿದೆ. ಖ್ಯಾತ ವೈದ್ಯ ಡಾ. ಸಿ. ಎನ್.  ಮಂಜುನಾಥ್ ಅವರು ದಸರಾ  ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ  ಸೇರಿದಂತೆ ಹಲವು  ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕೊರೊನಾ ವಾರಿಯರ್ಸ್ ನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳ ರೀತಿಯಲ್ಲಿ ದಸರಾ ಹಬ್ಬ ಆಚರಿಸಲಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.  ಜಂಬೂ ಸವಾರಿ ಸೇರಿದಂತೆ ಪ್ರಮುಖ ಕಾರ್ಯಕ್ರಮಗಳಿಗೆ   ಜನರ ಪ್ರವೇಶ ನಿರ್ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು