3:10 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಹಿಮಕುಸಿತದ ಭೀತಿ: ಹವಾಮಾನ ಇಲಾಖೆ ಎಚ್ಚರಿಕೆ

06/01/2022, 18:54

ಶ್ರೀನಗರ(reporterkarnataka.com):
ಜಮ್ಮು ಮತ್ತು ಕಾಶ್ಮೀರ ಹಿಮಾವೃತವಾಗಿದ್ದು, ಹಿಮಕುಸಿತ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಜನವರಿ 8ರವರೆಗೆ ಹಿಮ ಬೀಳುವ ನಿರೀಕ್ಷೆ ಇದೆ. ಜಮ್ಮು ಕಾಶ್ಮೀರದ ಎತ್ತರದ ಪ್ರದೇಶಗಳಲ್ಲಿ ಮಧ್ಯಮದಿಂದ ಭಾರೀ ಹಿಮಪಾತ ಆಗುತ್ತಿದ್ದು, ಹಿಮಕುಸಿತ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಹೆಚ್ಚು ಹಿಮ ಬೀಳುತ್ತಿರುವ ಪ್ರದೇಶಗಳಿಗೆ ಹೋಗುವುದನ್ನು ನಿಲ್ಲಿಸುವಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಹೋದರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಮದಿಂದಾಗಿ ಜನರ ಓಡಾಟಕ್ಕೆ ತೊಂದರೆಯಾಗಿದ್ದು, ವಸ್ತುಗಳನ್ನು ಸಾಗಿಸುವುದು ಕಷ್ಟವಾಗಿದೆ.

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಹಲವು ರಸ್ತೆಗಳ ಮೇಲೆ ಬೆಟ್ಟಗಳಿಂದ ಕಲ್ಲು, ಮಣ್ಣು ಕುಸಿದಿದ್ದು, ಸಂಚಾರ ಅಸಾಧ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು