ಇತ್ತೀಚಿನ ಸುದ್ದಿ
ಜನವರಿ 1ರಿಂದ ನರ್ಸಿಂಗ್, ಅರೆ ವೈದ್ಯಕೀಯ ಕಾಲೇಜು ಪ್ರಾರಂಭ: ಕೋವಿಡ್ ಪರೀಕ್ಷೆ ಕಡ್ಡಾಯ
December 28, 2020, 8:35 PM

ಮಂಗಳೂರು (reporterkarnataka news): ಜಿಲ್ಲೆಯಾದ್ಯಂತ ಹಲವಾರು ನರ್ಸಿಂಗ್ ಕಾಲೇಜು ಹಾಗೂ ಅರೆ ವೈದ್ಯಕೀಯ ಕಾಲೇಜುಗಳು ಜನವರಿ 1 ರಿಂದ ಕಾರ್ಯಾರಂಭವಾಗುವ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯವಾಗಿದೆ.
ಇಲ್ಲಿ ವಿದ್ಯಾಭ್ಯಾಸವನ್ನು ನಡೆಸುತ್ತಿರುವ ಹೆಚ್ಚಿನ ವಿದ್ಯಾರ್ಥಿಗಳು ಕೇರಳ, ಇತರ ರಾಜ್ಯ, ಹಾಗೂ ಕರ್ನಾಟಕದ ಇತರ ಜಿಲ್ಲೆಗಳ ವಿದ್ಯಾರ್ಥಿಗಳಿರುತ್ತಾರೆ. ಕೇರಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ಕಂಡುಬರುತ್ತಿದ್ದು, ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆ ತಡೆಗಟ್ಟುವುದು ಮುಖ್ಯವಾಗಿರುವುದರಿಂದ ಎಲ್ಲಾ ಶಾಲಾ ಕಾಲೇಜುಗಳ ಮುಖ್ಯಸ್ಥರುಗಳು ಕಾಲೇಜು ಆರಂಭವಾಗುವ 72 ಗಂಟೆಗಳ ಮುಂಚೆ, ವಿದ್ಯಾರ್ಥಿಗಳು ಹಾಗೂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್-19 ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಟ್ಟು ನೆಗಟಿವ್ ವರದಿಯೊಂದಿಗೆ ಹಾಜರಾಗಬೇಕು.
ಎಲ್ಲಾ ಕಾಲೇಜುಗಳು/ ಇತರ ಅರೆ ವೈದ್ಯಕೀಯ ಕಾಲೇಜುಗಳು ಸರ್ಕಾರದಿಂದ ನೀಡಿರುವ ಪ್ರಮಾಣಿತ ಕಾರ್ಯಚರಣಾ ಮಾರ್ಗಸೂಚಿಗಳನ್ನು (ಎಸ್ಓಪಿ)ಯನ್ನು ಕಡ್ಡಾಯವಾಗಿ ಪಾಲಿಸಬೇಕು. ದೇಶದ್ಯಾದಂತ ಕೋವಿಡ್-19 ಎರಡನೇ ಅಲೆಯು ಹರಡುವ ಸಾಧ್ಯತೆಯ ಗಂಭೀರತೆಯನ್ನು ತಿಳಿದುಕೊಂಡು ಅತ್ಯವಶಕ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಬೇಕು ಎಂದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.