ಇತ್ತೀಚಿನ ಸುದ್ದಿ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ ಆಚರಣೆ
August 15, 2020, 11:30 AM

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿನಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು ಜಿಲ್ಲಾ ಪಂಚಾಯತಿನ ಉಪಾಧ್ಯಕ್ಷೆ ಕಸ್ತೂರಿ ಪಂಜ ನೆರವೇರಿಸಿದರು. ಗಂಧಗಿ ಮುಕ್ತ ಭಾರತ್ ಅಭಿಯಾನದ ಅಂಗವಾಗಿ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ಪ್ರತಿಜ್ಞೆಯನ್ನು ಜಿಲ್ಲಾ ಪಂಚಾಯತಿನ ಉಪ ಕಾರ್ಯದರ್ಶಿ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿಯಾಗಿರುವ ಆನಂದ್ ಕುಮಾರ್ ಕೆ. ಭೋಧಿಸಿದರು. ಜಿಪಂ ಮುಖ್ಯ ಯೋಜನಾಧಿಕಾರಿ ಸಂಧ್ಯಾ ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.