3:05 PM Tuesday24 - November 2020
ಬ್ರೇಕಿಂಗ್ ನ್ಯೂಸ್
ಒಂದೇ ದಿನ ಮಾರಕ ಕೊರೊನಾಕ್ಕೆ 480 ಬಲಿ: 86,04,955 ಮಂದಿ ಗುಣಮುಖ ರೆಬೆಲ್ ಸ್ಟಾರ್  ಅಂಬರೀಷ್ ಎರಡನೆ ಪುಣ್ಯತಿಥಿ ಇಂದು ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಆಯ್ಕೆ ಪ್ರಶ್ನಿಸಿ ಅರ್ಜಿ: ಇಂದು ಸುಪ್ರೀಂ ಕೋರ್ಟ್… ಸಹಕಾರ ಹಾಲು ಡೈರಿಗೆ ಕ್ಷೀರ ನೀಡುವ ಮೂಲಕ ವಿವಿಧ ಸೌಲಭ್ಯ ಪಡೆಯಲು ಸಲಹೆ ಮಾಜಿ ಸಭಾಪತಿ ರಮೇಶ್ ಕುಮಾರ್ ಹುಟ್ಟುಹಬ್ಬ ಪ್ರಯುಕ್ತ ಕಾಂಗ್ರೆಸ್ ನಿಂದ ಅನ್ನಸಂತರ್ಪಣೆ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಯ್ ನಿಧನ ಶಾಲೆ ಆರಂಭ ಪ್ರಸ್ತಾಪ: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ  ಉದಯೋನ್ಮುಖ ಕ್ರಿಕೆಟಿಗ ನವದೀಪ್ ಸೈನಿಗೆ ಹುಟ್ಟುಹಬ್ಬದ ಶುಭ ಕೋರಿದ ಕೊಹ್ಲಿ ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ: ನಾಳೆ ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಚರ್ಚೆ ರಾಜಕೀಯ ರಂಗದಲ್ಲಿ ಕುತೂಹಲ ಕೆರಳಿಸಿದ ಸಚಿವ ಸೋಮಣ್ಣ ದಿಢೀರ್ ದೆಹಲಿ ಭೇಟಿ

ಇತ್ತೀಚಿನ ಸುದ್ದಿ

ಕಾಶೀ ಮಠಾಧೀಶರ ಚಾತುರ್ಮಾಸ ಸಂಪನ್ನ: ರಥಬೀದಿ ವೆಂಕಟರಮಣ ದೇಗುಲಕ್ಕೆ ಭೇಟಿ

September 2, 2020, 2:40 PM

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka news) :

ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ ವ್ರತವು ಬುಧವಾರ ಕೊಂಚಾಡಿ ಕಾಶೀ ಮಠದಲ್ಲಿ ಮೃತ್ತಿಕಾ ವಿಸರ್ಜನೆಯ ಬಳಿಕ ಸಂಪನ್ನ ಗೊಂಡಿತು.

ಬಳಿಕ ಶ್ರೀಗಳವರು ಸೀಮೋಲಂಘನ ಪ್ರಯುಕ್ತ ಮಂಗಳೂರಿನ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ  ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಸಮಾಜ ಬಾಂಧವರ ಪರವಾಗಿ ದೇವಳದ ಆಡಳಿತ ಮಂಡಳಿಯವರಿಂದ ಪಾದ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.

ಮೊಕ್ತೇಸರರಾದ ಸಿ. ಎಲ್. ಶೆಣೈ , ಪ್ರಶಾಂತ್ ರಾವ್, ರಾಮಚಂದ್ರ  ಕಾಮತ್ , ಲೆಕ್ಕ ಪರಿಶೋಧಕ ಜಗನ್ನಾಥ್ ಕಾಮತ್, ಕೊಂಚಾಡಿ ಕಾಶೀ ಮಠದ ವಾಸುದೇವ್ ಕಾಮತ್ , ಕಸ್ತೂರಿ ಸದಾಶಿವ ಪೈ , ರತ್ನಾಕರ್ ಕಾಮತ್ ಹಾಗೂ ನೂರಾರು ಸಮಾಜ ಬಾಂಧವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು